ನವದೆಹಲಿ: 'ವಿಕಸಿತ ಭಾರತ'ಕ್ಕೆ ಸಂಬಂಧಿಸಿದಂತೆ ವಾಟ್ಸ್‌ಆಯಪ್ ಮೂಲಕ ಹರಿದಾಡುತ್ತಿರುವ ಸಂದೇಶವನ್ನು ಕೂಡಲೇ ತಡೆಹಿಡಿಯಬೇಕು ಎಂದು ಚುನಾವಣಾ ಆಯೋಗವು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಗುರುವಾರ ಸೂಚನೆ ನೀಡಿದೆ. ಈ ಬಗ್ಗೆ ಎಎನ್‌ಐ ವರದಿ ಮಾಡಿದೆ.

ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಹಾಗೂ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರವೂ ಜನರ ಮೊಬೈಲ್‌ಗಳಿಗೆ ಈ ಸಂದೇಶ ಬರುತ್ತಿದೆ ಎಂದು ಹಲವರು ದೂರು ನೀಡಿದ್ದಾರೆ ಎಂದು ಆಯೋಗ ತಿಳಿಸಿದೆ.
ಮಾದರಿ ನೀತಿ ಸಂಹಿತೆ ಜಾರಿಗೂ ಮುನ್ನ ವಾಟ್ಸ್‌ಆಯಪ್ ಮೂಲಕ ಕಳುಹಿಸಲಾಗಿರುವ ಸಂದೇಶಗಳು ತಾಂತ್ರಿಕ ಹಾಗೂ ನೆಟ್‌ವರ್ಕ್ ಸಮಸ್ಯೆಯಿಂದಾಗಿ ತಡವಾಗಿ ವಿತರಣೆಯಾಗಿರಬಹುದು ಎಂದು ಆಯೋಗಕ್ಕೆ ಸಚಿವಾಲಯ ಮಾಹಿತಿ ನೀಡಿದೆ ಎಂದೂ ವರದಿಯಲ್ಲಿ ಹೇಳಲಾಗಿದೆ.