ತಿರುವನಂತಪುರಂ: ಕೇರಳ ವಿಧಾನಸಭೆ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ. ಚುನಾವಣೆ ಘೋಷಣೆಯಾದ ಸಂದರ್ಭದಲ್ಲಿ ಜನರಲ್ಲಿ ಭಯ ಮೂಡಿಸುವುದು ಇದರ ಉದ್ದೇಶ ಎಂದು ತಿಳಿದುಬಂದಿದೆ.
ಕೇಂದ್ರ ಭದ್ರತಾ ಏಜೆನ್ಸಿಗಳ ನಿರ್ದೇಶನದ ಮೇರೆಗೆ ವಿಧಾನಸಭೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ವಿಧಾನಸಭೆ ಪ್ರವೇಶಕ್ಕೆ ನಿಯಂತ್ರಣ ಹೇರಲಾಗಿದೆ. ಪ್ರವೇಶಿಸುವವರು ಅಧಿಕೃತ ಗುರುತಿನ ಚೀಟಿಯನ್ನು ಹೊಂದಿರಬೇಕು.
ಶಾಸಕಾಂಗವು ಅಧಿಕೃತ ಪತ್ರಿಕಾ ಪ್ರಕಟಣೆಯ ಮೂಲಕ ಪ್ರವೇಶದ್ವಾರದಲ್ಲಿ ಭದ್ರತಾ ವ್ಯವಸ್ಥೆಗಳಿಗೆ ಸಂಪೂರ್ಣ ಸಹಕಾರವನ್ನು ಕೋರಿದೆ.