ಮಂಜೇಶ್ವರ : ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ವ ಶಿಕ್ಷಾ ಕೇರಳ ಹಾಗೂ ಬಿ.ಆರ್.ಸಿ. ಮಂಜೇಶ್ವರದ ವತಿಯಿಂದ ಶಾಲೆಯ ಹೆಣ್ಮಕ್ಕಳಿಗೆ ಕರಾಟೆ ತರಬೇತಿಯ ಉದ್ಘಾಟನಾ ಸಮಾರಂಭ ನಡೆಯಿತು.
ಕಾರ್ಯಕ್ರಮವನ್ನು ಬಿ.ಆರ್.ಸಿ. ಮಂಜೇಶ್ವರದ ಸಿ.ಆರ್.ಸಿ. ಸಂಯೋಜಕಿ ಮೋಹಿನಿ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸತೀಶ್ ಎಲಿಯಾಣ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕರಾಟೆ ತರಬೇತುದಾರರಾದ ಸನತ್, ಮಂಜುನಾಥ್ ವೈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದರು. ಶತಮಾನೋತ್ಸವ ಕಾರ್ಯಕ್ರಮ ಸಮಿತಿ ಅಧ್ಯಕ್ಷ ಹರಿರಾಮ ಕುಳೂರು, ಜೊತೆ ಕಾರ್ಯದರ್ಶಿ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಮಾತೃ ಪಿ.ಟಿ.ಎ. ಅಧ್ಯಕ್ಷೆ ಸುಚರಿತ ಚಿನಾಲ ಉಪಸ್ಥಿತರಿದ್ದರು.
ಶಿಕ್ಷಕಿಯರಾದ ಸೌಮ್ಯ ಪಿ ಸ್ವಾಗತಿಸಿ, ಕುಮಾರಿ ಭಾಗ್ಯಲಕ್ಷ್ಮಿ ಪಿ ವಂದಿಸಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು.