ಕಾಸರಗೋಡು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಪಾಲನೆ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ತರಬೇತಿ ಕಾರ್ಯಕ್ರಮ ಮಾ. 7ರಂದು ಬೆಳಗ್ಗೆ 11 ರಿಂದ ಕಾಸರಗೋಡು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಸಿ ಚುನಾವಣಾ ಪ್ರಚಾರ ಸಾಮಗ್ರಿಗಳ ಬೆಲೆ ನಿರ್ಧರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.