ತಿರುವನಂತಪುರಂ: ರಾಜ್ಯದಲ್ಲಿ ಬೇಸಿಗೆಯ ತೀವ್ರ ತಾಪಕ್ಕೆ ಪರಿಹಾರವಾಗಿ ಕೆಲ ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.
ಶುಕ್ರವಾರ ತಿರುವನಂತಪುರಂ ಮತ್ತು ಕೊಲ್ಲಂ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಶನಿವಾರವೂ ಮಳೆಯಾಗುವ ನಿರೀಕ್ಷೆಯಿದೆ.
ಏತನ್ಮಧ್ಯೆ, ಇಂದು ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕೆಗೆ ಯಾವುದೇ ನಿಬರ್ಂಧವಿಲ್ಲ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಹೆಚ್ಚಿನ ಶಾಖವನ್ನು ಅನುಭವಿಸುತ್ತಿದೆ. ಹಲವೆಡೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಭಾನುವಾರದವರೆಗೆ ಕೊಲ್ಲಂ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ 39 ಡಿಗ್ರಿ ಸೆಲ್ಸಿಯಸ್, ತ್ರಿಶೂರ್ ಜಿಲ್ಲೆಯಲ್ಲಿ 38 ಡಿಗ್ರಿ ಸೆಲ್ಸಿಯಸ್, ಪತ್ತನಂತಿಟ್ಟ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ 37 ಡಿಗ್ರಿ ಸೆಲ್ಸಿಯಸ್ ಮತ್ತು ಕೊಟ್ಟಾಯಂ, ಕೋಯಿಕ್ಕೋಡ್, ಮಲಪ್ಪುರಂ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ 36 ಡಿಗ್ರಿ ಸೆಲ್ಸಿಯಸ್‍ಗೆ ಹೆಚ್ಚಿನ ತಾಪಮಾನ ಏರಿಕೆಯಾಗುವ ನಿರೀಕ್ಷೆಯಿದೆ.