ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನದ ಬೆನ್ನಲ್ಲೇ ದೆಹಲಿ ಬಿಜೆಪಿ ನಾಯಕರು ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಇಂದು( ಶನಿವಾರ) ಪುಷ್ಪ ನಮನ ಸಲ್ಲಿಸಿ, ಭ್ರಷ್ಟಾಚಾರದ ವಿರುದ್ಧ ಹೋರಾಡುವ ಪ್ರತಿಜ್ಞೆ ಮಾಡಿದರು.

ಈ ವೇಳೆ ರಾಜ್‌ಘಾಟ್‌ನಲ್ಲಿ ಬಿಜೆಪಿ ನಾಯಕರು 'ರಘುಪತಿ ರಾಘವ ರಾಜ ರಾಮ' ಎಂದು ಹಾಡಿದ್ದಾರೆ.
'ನಾವು ಬಿಜೆಪಿ ಕಾರ್ಯಕರ್ತರು, ನಾವು ಯಾವಾಗಲೂ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಮೊದಲು ಧ್ವನಿ ಎತ್ತುತ್ತೇವೆ. ಭ್ರಷ್ಟಾಚಾರದ ವಿರುದ್ಧ ಕೆಲಸ ಮಾಡುತ್ತೇವೆ' ಎಂದು ಪ್ರತಿಜ್ಞೆ ಕೈಗೊಂಡರು.
ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಮಾರ್ಚ್ 28ರವರೆಗೆ ಜಾರಿ ನಿರ್ದೇಶನಾಲಯದ(ಇ.ಡಿ) ಕಸ್ಟಡಿಗೆ ಒಪ್ಪಿಸಿ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಆದೇಶಿಸಿದೆ.