ಮಂಜೇಶ್ವರ : ಕುಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24 ನೇ ಸಾಲಿನ ಶಾಲಾ ಮಟ್ಟದ ಕಲಿಕೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ವಾರ್ಡ್ ಸದಸ್ಯ ಜನಾರ್ಧನ ಪೂಜಾರಿ ಕುಳೂರು ಉದ್ಘಾಟಿಸಿದರು. ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸತೀಶ್ ಎಲಿಯಾಣ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮಂಜೇಶ್ವರ ಬಿ.ಆರ್.ಸಿ. ಯ ಸಿ.ಆರ್.ಸಿ. ಸಂಯೋಜಕಿ ಮೋಹಿನಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಮೊಹಮ್ಮದ್ ಹಾಜಿ ಕಂಚಿಲ, ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಚರಿತ ಚಿನಾಲ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಚೈತ್ರ ಕಲ್ಕಾರ್ ಉಪಸ್ಥಿತರಿದ್ದರು.
ಶಾಲಾ ಶಿಕ್ಷಕಿ ಭಾಗ್ಯಲಕ್ಷ್ಮಿ ಪಿ ಕಲಿಕೋತ್ಸವ ಗೀತೆಯನ್ನು ಹಾಡಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಶಾಲಾ ಹಿರಿಮೆ ವರದಿಯನ್ನು ಮಂಡಿಸಿದರು. ಶಾಲಾ ಶಿಕ್ಷಕಿ ಶ್ವೇತ ಇ ಸ್ವಾಗತಿಸಿ, ಶಿಕ್ಷಕಿ ಅಶ್ವಿನಿ ಎಂ ವಂದಿಸಿದರು. ಶಿಕ್ಷಕಿ ಸೌಮ್ಯ ಪಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲಾ ಮಕ್ಕಳಿಂದ ವಿವಿಧ ಕಲಿಕಾ ಪ್ರದರ್ಶನವು ನಡೆಯಿತು.