HEALTH TIPS

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ: ಹಣಕಾಸು ಸಚಿವೆ ನಿರ್ಮಲಾ

              ವದೆಹಲಿ: ಲೋಸಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ ಎಂದು ಹೇಳುವ ಮೂಲಕ ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿರುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

               ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವಂತೆ ಆಯ್ಕೆ ನೀಡಿದ್ದರು.

                ಆದರೆ ಅಂತಿಮವಾಗಿ ಸ್ಪರ್ಧಿಸುವುದು ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದೇನೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

                ತಮಿಳುನಾಡು ಅಥವಾ ಆಂಧ್ರಪ್ರದೇಶದಿಂದ ಸ್ಪರ್ಧಿಸುವುದೇ ಎಂಬ ಸಮಸ್ಯೆಯು ನನ್ನ ಮುಂದಿತ್ತು. ಗೆಲುವಿಗೆ ಇತರೆ ಹಲವು ಮಾನದಂಡಗಳನ್ನು ಅವಲಂಬಿಸಿರುತ್ತದೆ. ನೀವು ಈ ಸಮುದಾಯದವರೇ ಅಥವಾ ಆ ಧರ್ಮದಿಂದ ಬಂದವರೇ? ಹೀಗೆ ಹಲವು ಪ್ರಶ್ನೆಗಳು ಉದ್ಭವಿಸುತ್ತದೆ. ಹಾಗಾಗಿ ನನ್ನಿಂದ ಸಾಧ್ಯವಿಲ್ಲ ಎಂದೆನಿಸಿತು ಎಂದು ಅವರು ತಿಳಿಸಿದ್ದಾರೆ.

             ಭಾರತದ ಹಣಕಾಸು ಸಚಿವೆಯಾಗಿದ್ದು, ನಿಮ್ಮ ಬಳಿ ಹಣವಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ನಿರ್ಮಲಾ, ಅದು ಸರ್ಕಾರದ ಹಣ ನನ್ನದಲ್ಲ. ನನ್ನ ಸಂಬಳ, ನನ್ನ ಗಳಿಕೆ, ನನ್ನ ಉಳಿತಾಯ ನನ್ನದ್ದಷ್ಟೇ ಎಂದರು.

                 ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ನಿರ್ಮಲಾ ತಿಳಿಸಿದ್ದಾರೆ.

ಆಡಳಿತಾರೂಢ ಬಿಜೆಪಿಯು ಹಲವಾರು ರಾಜ್ಯಸಭಾ ಸದಸ್ಯರನ್ನು ಲೋಕಸಭಾ ಚುನಾವಣೆಗೆ ಕಣಕ್ಕಿಳಿಸಿದೆ. ಇವರಲ್ಲಿ ಮುಖ್ಯವಾಗಿ ಪಿಯೂಷ್ ಗೋಯಲ್, ಭೂಪೇಂದರ್ ಯಾದವ್, ರಾಜೀವ್ ಚಂದ್ರಶೇಖರ್, ಮನ್ಸುಖ್ ಮಾಂಡವಿಯಾ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಸೇರಿದ್ದಾರೆ.

ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries