ಇಸ್ಲಾಮಾಬಾದ್: ಪಾಕಿಸ್ತಾನವು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವುದರಿಂದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಅವರ ಸಂಪುಟ ಸದಸ್ಯರು ತಮಗೆ ಲಭ್ಯವಾಗುವ ವೇತನ ಮತ್ತಿತರ ಸೌಲಭ್ಯಗಳನ್ನು ಪಡೆಯದೇ ಇರಲು ನಿರ್ಧರಿಸಿದ್ದಾರೆ.
ಇಸ್ಲಾಮಾಬಾದ್: ಪಾಕಿಸ್ತಾನವು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವುದರಿಂದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಅವರ ಸಂಪುಟ ಸದಸ್ಯರು ತಮಗೆ ಲಭ್ಯವಾಗುವ ವೇತನ ಮತ್ತಿತರ ಸೌಲಭ್ಯಗಳನ್ನು ಪಡೆಯದೇ ಇರಲು ನಿರ್ಧರಿಸಿದ್ದಾರೆ.
ಅನಗತ್ಯ ಖರ್ಚುವೆಚ್ಚಗಳನ್ನು ಕಡಿತಗೊಳಿಸುವ ಉದ್ದೇಶದಿಂದ ಕಠಿಣ ಕ್ರಮ ಜಾರಿ ಮಾಡುವ ಸಲುವಾಗಿ ಬುಧವಾರ ಕರೆದಿದ್ದ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯವು ತಿಳಿಸಿದೆ.
ಸರ್ಕಾರದ ಹಣದಿಂದ ತೆರಳುವ ವಿದೇಶಿ ಪ್ರವಾಸಗಳಿಗೆ ಈಗಾಗಲೇ ನಿರ್ಬಂಧ ಹೇರಲಾಗಿದೆ. ಸಚಿವರು, ಜನಪ್ರತಿನಿಧಿಗಳು ಮತ್ತು ಸರ್ಕಾರಿ ಅಧಿಕಾರಿಗಳು ಅನುಮತಿ ಇಲ್ಲದೆ ಸರ್ಕಾರದ ಹಣ ಬಳಸಿಕೊಂಡು ವಿದೇಶಿ ಪ್ರವಾಸ ಕೈಗೊಳ್ಳುವಂತಿಲ್ಲ ಎಂದು ಆದೇಶಿಸಲಾಗಿದೆ.
ಅಧ್ಯಕ್ಷ ಆಸಿಪ್ ಆಲಿ ಜರ್ದಾರಿ ಮತ್ತು ಗೃಹ ಸಚಿವ ಮೊಹ್ಸಿನ್ ನಕ್ವಿ ಅವರು ತಮ್ಮ ವೇತನವನ್ನು ಬಿಟ್ಟುಕೊಡುವುದಾಗಿ ಈ ಹಿಂದೆಯೇ ಘೋಷಿಸಿದ್ದಾರೆ.