ಪತ್ತನಂತಿಟ್ಟ: ಮೌಂಟ್ ಸಿಯಾನ್ ಕಾನೂನು ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಫ್‍ಐ ಮುಖಂಡ ಜೇಸನ್ ಜೋಸೆಫ್ ಪೋಲೀಸರಿಗೆ ಶರಣಾಗಿದ್ದಾನೆ.
ಪತ್ತನಂತಿಟ್ಟ ಡಿವೈಎಸ್ಪಿ ಕಚೇರಿಯಲ್ಲಿ ಶರಣಾಗಿದ್ದಾನೆ. ಜೇಸನ್ ಪುರನಾಡ್ ಬ್ಲಾಕ್ ಕಾರ್ಯದರ್ಶಿ ಮತ್ತು ಸಿಪಿಎಂ ಪ್ರದೇಶ ಸಮಿತಿ ಸದಸ್ಯನೂ ಆಗಿದ್ದಾನೆ.
ಡಿಸೆಂಬರ್ 20 ರಂದು ಕಾನೂನು ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಲಾಗಿತ್ತು. ಆರೋಪಿಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ದೂರಿನ ಮೇರೆಗೆ ಪೋಲೀಸರು ಆರಂಭದಲ್ಲಿ ಪ್ರಕರಣ ದಾಖಲಿಸಿಕೊಂಡಿರಲಿಲ್ಲ. ಸಂತ್ರಸ್ತೆಯ ದೂರಿನ ಮೇರೆಗೆ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ ಪೋಲೀಸರು ದೂರುದಾರರ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದರು. ನಂತರ ವಿದ್ಯಾರ್ಥಿಗಳ ಪ್ರತಿಭಟನೆಯ ನಂತರ ಬಂಧಿಸಲಾಯಿತು. ಜೇಸನ್ ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನವರಿ 9 ರಂದು ಹೈಕೋರ್ಟ್ ತಿರಸ್ಕರಿಸಿತ್ತು. ಮನವಿ ತಿರಸ್ಕøತಗೊಂಡರೂ ಜೇಸನ್ ನನ್ನು ಬಂಧಿಸದಿರುವುದು ಭಾರೀ ಟೀಕೆಗೆ ಕಾರಣವಾಗಿತ್ತು.