ಗಾಜಿಪುರ: ಹೈ ವೋಲ್ಟೇಜ್ ವಿದ್ಯುತ್ ತಂತಿ ತಗುಲಿ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದ್ದು, ಐವರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.
ಗಾಜಿಪುರ: ಹೈ ವೋಲ್ಟೇಜ್ ವಿದ್ಯುತ್ ತಂತಿ ತಗುಲಿ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದ್ದು, ಐವರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.
ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ಕುಟುಂಬವೊಂದು ಮದುವೆ ಕಾರ್ಯಕ್ರಮಗಳನ್ನು ಮುಗಿಸಿ ದೇವಸ್ಥಾನಕ್ಕೆ ತೆರಳುವ ವೇಳೆ ರಸ್ತೆಯ ಮೇಲೆ ಹಾದುಹೋದ ವಿದ್ಯುತ್ ತಂತಿ ಬಸ್‌ಗೆ ತಗುಲಿದ್ದು, ಬೆಂಕಿ ಹೊತ್ತಿಕೊಂಡಿದೆ.
ಘಟನೆಯ ಬಗ್ಗೆ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ ₹50 ಸಾವಿರ ಪರಿಹಾರ ಘೋಷಣೆ ಮಾಡಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.