ಕೊಯಮತ್ತೂರು: ಇಶಾ ಫೌಂಡೇಶನ್ ಸಂಸ್ಥಾಪಕ ಮತ್ತು ಆಧ್ಯಾತ್ಮಿಕ ಶಿಕ್ಷಕ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿದೆ.
ತುರ್ತು ಮಿದುಳಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಸದ್ಗುರು ಜಗ್ಗಿ ವಾಸುದೇವ್ ಚೇತರಿಕೆ
0
ಮಾರ್ಚ್ 22, 2024
Tags
ಕೊಯಮತ್ತೂರು: ಇಶಾ ಫೌಂಡೇಶನ್ ಸಂಸ್ಥಾಪಕ ಮತ್ತು ಆಧ್ಯಾತ್ಮಿಕ ಶಿಕ್ಷಕ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿದೆ.
ಇದೇ ತಿಂಗಳ 17ರಂದು ದೆಹಲಿಯ ಇಂದ್ರಪ್ರಸ್ಥ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಸದ್ಗುರು ಜಗ್ಗಿ ವಾಸುದೇವ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಮಾರ್ಚ್ 15 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಹೆಚ್ಚಿನ ತಪಾಸಣೆ ನಡೆಸಿದಾಗ ಅವರ ಮೆದುಳಿನಲ್ಲಿ ರಕ್ತಸ್ರಾವವಾಗಿರುವುದು ಕಂಡುಬಂದಿದೆ. ಕಳೆದ ನಾಲ್ಕು ವಾರಗಳಿಂದ ತೀವ್ರ ತಲೆನೋವಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಒಳಗಾಗಿದ್ದಾರೆ.