ನವದೆಹಲಿ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗವು ಇಂದು (ಸೋಮವಾರ) ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ.
ನವದೆಹಲಿ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗವು ಇಂದು (ಸೋಮವಾರ) ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ.
ಹೆಚ್ಚುವರಿಯಾಗಿ ಮಿಜೋರಾಂ ಮತ್ತು ಹಿಮಾಚಲ ಪ್ರದೇಶದ ಆಡಳಿತ ಇಲಾಖೆಯ ಕಾರ್ಯದರ್ಶಿಯನ್ನೂ ಚುನಾವಣಾ ಆಯೋಗ ಬದಲಾಯಿಸಿದೆ.
ಲೋಕಸಭೆ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದ ಕೆಲವೇ ದಿನಗಳಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ಚುನಾವಣಾ ಸಮಿತಿಯು ಬೃಹನ್‌ಮುಂಬೈ ಮುನ್ಸಿಪಲ್ ಕಮಿಷನರ್ ಇಕ್ಬಾಲ್ ಸಿಂಗ್ ಚಾಹಲ್, ಹೆಚ್ಚುವರಿ ಆಯುಕ್ತರು ಮತ್ತು ಉಪ ಆಯುಕ್ತರನ್ನು ಬದಲಾಯಿಸುವಂತೆ ಆದೇಶಿಸಿದೆ.
ಮೂರು ವರ್ಷ ಪೂರೈಸಿದ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಆಯೋಗವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿತ್ತು. ಆದರೆ, ಕೆಲವು ನಗರಸಭೆ ಪೌರಾಯುಕ್ತರು ಮತ್ತು ಕೆಲವು ಹೆಚ್ಚುವರಿ ಮತ್ತು ಉಪ ಪೌರಾಯುಕ್ತರಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರವು ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸಿಲ್ಲ ಎಂದು ವರದಿಯಾಗಿದೆ.