ನವದೆಹಲಿ: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿರುವ ಕೇಂದ್ರ ಚುನಾವಣಾ ಆಯೋಗ ಈ ಬಾರಿ ಮಾತು ಕಡಿಮೆ, ಕಠಿಣ ಕ್ರಮಗಳು ಹೆಚ್ಚಿರುತ್ತದೆ ಎಂದು ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದೆ.
ನೀತಿ ಸಂಹಿತೆ ಉಲ್ಲಂಘಿಸುವವರು ಆಯೋಗದ ಕಠಿಣ ಪರಿಣಾಮಗಳನ್ನು ಅನುಭವಿಸಲು ಸಿದ್ಧರಾಗಿರಬೇಕು ಎಂದು ಭಾರತ ಚುನಾವಣಾ ಆಯೋಗ ಎಚ್ಚರಿಸಿದೆ.
ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ವಿಫಲವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುವ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ವರ್ತಿಸುವುದಾಗಿ ಚುನಾವಣಾ ಆಯೋಗ ಪ್ರಕಟಿಸಿದೆ.
ಕಳೆದ ಬಾರಿ, ಆಯೋಗ ತುಂಬಾ ನೋಟಿಸ್ ನೀಡಿದ್ದು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪವಿದೆ. ಆದರೆ ಈ ಬಾರಿ ನಾವು ಎಲ್ಲರಿಗೂ ಎಚ್ಚರಿಕೆ ನೀಡುತ್ತೇವೆ. ನಾವು ಸೂಚನೆ ಮೀರಿ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.