HEALTH TIPS

ಜೈಲಿನಲ್ಲಿದ್ದು ವಿಧ್ವಂಸಕ ಕೃತ್ಯಕ್ಕೆ ಸಂಚು: ಬೆಂಗಳೂರು ಸೇರಿ ಹಲವೆಡೆ NIA ದಾಳಿ

              ವದೆಹಲಿಉಗ್ರಗಾಮಿ ಸಂಘಟನೆಲಷ್ಕರ್ ಎ ತಯಬಾದ (ಎಲ್‌ಇಟಿ) ಕೆಲ ಸದಸ್ಯರು ಜೈಲಿನಲ್ಲಿದ್ದುಕೊಂಡೇ ಕರ್ನಾಟಕದಲ್ಲಿ ಆತ್ಮಾಹುತಿ ದಾಳಿ ಮತ್ತು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಇಂದು ಬೆಂಗಳೂರು ಸೇರಿದಂತೆ ದೇಶದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ.

                ಬೆಂಗಳೂರು ಸೇರಿದಂತೆ 7 ರಾಜ್ಯಗಳ 17 ಸ್ಥಳಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಎನ್‌ಐಎ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

              2023 ರ ಜುಲೈ 8ರಂದು ಬೆಂಗಳೂರಿನಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಇಬ್ಬರು ಸೇರಿ ಸಂಘಟನೆಯ ಎಂಟು ಮಂದಿ ಸದಸ್ಯರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಜನವರಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

             ಈ ಆರೋಪಿಗಳ ಜೊತೆ ಇನ್ನೂ ಹಲವರು ಸಂಪರ್ಕದಲ್ಲಿದ್ದಾರೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಎನ್‌ಐಎ ಇಂದು ಈ ವ್ಯಾಪಕ ದಾಳಿ ಕೈಗೊಂಡಿದೆ.

            ಆರೋಪಿಗಳಲ್ಲಿ ಕೇರಳದ ಕಣ್ಣೂರಿನ ಟಿ.ನಾಸೀರ್ ಎಂಬಾತ ಬೇರೊಂದು ಪ್ರಕರಣದಲ್ಲಿ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಇನ್ನಿಬ್ಬರು ಆರೋಪಿಗಳಾದ ಜುನೈದ್ ಅಹ್ಮದ್ ಅಲಿಯಾಸ್ ಜೆಡಿ ಮತ್ತು ಸಲ್ಮಾನ್ ಖಾನ್ ವಿದೇಶಕ್ಕೆ ಪರಾರಿಯಾಗಿರುವ ಶಂಕೆ ಇದೆ ಎಂದು ಎನ್‌ಐಎ ವಕ್ತಾರರು ತಿಳಿಸಿದ್ದಾರೆ.

               ಉಳಿದ ಆರೋಪಿಗಳು ಸೈಯದ್ ಸುಹೇಲ್ ಖಾನ್ ಅಲಿಯಾಸ್ ಸುಹೇಲ್, ಮೊಹಮ್ಮದ್ ಉಮರ್ ಅಲಿಯಾಸ್ ಉಮರ್, ಜಾಹಿದ್ ತಬ್ರೇಜ್ ಅಲಿಯಾಸ್ ಜಾಹಿದ್, ಸೈಯದ್ ಮುದಸ್ಸಿರ್ ಪಾಷಾ ಮತ್ತು ಮೊಹಮ್ಮದ್ ಫೈಸಲ್ ರಬ್ಬಾನಿ ಅಲಿಯಾಸ್ ಸಾದತ್ ಬಂಧನದಲ್ಲಿದ್ದಾರೆ. ಈ ಎಲ್ಲ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ, ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದೋಷಾರೋಪ ಹೊರಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

                ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ 2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟದ ರೂವಾರಿ ಟಿ.ನಾಸೀರ್‌ನ ಕೈವಾಡವು ಈ ಸಂಚಿನಲ್ಲಿರುವ ಬಗ್ಗೆ ಇತರ ಆರೋಪಿಗಳು ವಿಚಾರಣೆ ವೇಳೆ ಬಾಯಿಬಿಟ್ಟಿದ್ದರು. ಅದಾದ ಮೇಲೆ ಬಾಡಿ ವಾರಂಟ್‌ ಪಡೆದು ಜೈಲಿನಿಂದಲೇ ಸಿಸಿಬಿ ಪೊಲೀಸರು ನಾಸೀರ್‌ನನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ನಂತರ ಪ್ರಕರಣವನ್ನು 2023ರ ಅಕ್ಟೋಬರ್‌ನಲ್ಲಿ ಎನ್‌ಐಎಗೆ ವಹಿಸಲಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries