ವಯನಾಡು: ಸುಲ್ತಾನ್ ಬತ್ತೇರಿಯ ಮುಳಂಕಾಂವ್ ರಾಷ್ಟ್ರೀಯ ಹೆದ್ದಾರಿ ಬದಿಯ ಕರಸ್ಸೆರಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ನಿನ್ನೆ ಹನ್ನೊಂದು ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು.
ಬಿದಿರಿನ ಮೆಳೆಗೆ ಬೆಂಕಿ ತಗುಲಿದ ನಂತರ ಸಮೀಪದ ರಬ್ಬರ್ ತೋಟ ಹಾಗೂ ಇತರೆಡೆ ಬೆಂಕಿ ವ್ಯಾಪಿಸಿದೆ. ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಸುಲ್ತಾನ್ ಬತ್ತೇರಿಯಿಂದ ಮುತ್ತಂಗಗೆ ಹೋಗುವ ಮಾರ್ಗದಲ್ಲಿ ರೈಲ್ವೇಯ ಭಾಗಕ್ಕೆ ಬೆಂಕಿ ತಗುಲಿದೆ. ಜನವಸತಿ ಪ್ರದೇಶಗಳಿಗೆ ಬೆಂಕಿ ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗಿಡಗಂಟಿಗಳು ಸುಟ್ಟು ಹೋಗಿವೆ. ಬೆಂಕಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಮಾರು ನೂರು ಎಕರೆ ಅರಣ್ಯ ಪ್ರದೇಶ ಕಾಡ್ಗಿಚ್ಚಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.