ಕಾಸರಗೋಡು: ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ 10 ಅಡಿಯಷ್ಟು ಆಳದ ಹೊಂಡಕ್ಕೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬಳು ಮೃತಪಟ್ಟು, ಪತಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡ ಘಟನೆ ಬದಿಯಡ್ಕದ ಉಬ್ರಂಗಳ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.
ಕಾಸರಗೋಡು: ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ 10 ಅಡಿಯಷ್ಟು ಆಳದ ಹೊಂಡಕ್ಕೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬಳು ಮೃತಪಟ್ಟು, ಪತಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡ ಘಟನೆ ಬದಿಯಡ್ಕದ ಉಬ್ರಂಗಳ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.
ಮಾವಿನಕಟ್ಟೆಯ ದಿನೇಶ್ ಎಂಬವರ ಪತ್ನಿ ಅನುಷಾ(25) ಮೃತಪಟ್ಟವರು.
ಬುಧವಾರ ರಾತ್ರಿ ದಿನೇಶ್ ಅವರು ಪತ್ನಿ ಮತ್ತು ಮಗುವಿನೊಂದಿಗೆ ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಉಬ್ರಂಗಳ ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಬೈಕ್ 10 ಅಡಿಯಷ್ಟು ಆಳದ ಹೊಂಡಕ್ಕೆ ಉರುಳಿಬಿದ್ದಿದೆ. ಬೊಬ್ಬೆ ಕೇಳಿ ಧಾವಿಸಿ ಬಂದ ಸ್ಥಳೀಯರು ಮೂವರನ್ನು ಮೇಲಕ್ಕೆ ತ್ತಿ ಬದಿಯಡ್ಕದ ಆಸ್ಪತ್ರೆಗೆ ತಲಪಿಸಿದರೂ ಅಷ್ಟರಲ್ಲಿ ಅನುಷಾ ಕೊನೆಯುಸಿರೆಳೆದಿದ್ದರು.
ಈ ಬಗ್ಗೆ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.