ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸಾರ್ವಜನಿಕರ ಹಿತ ಹಾಗೂ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಎ.19 ಮತ್ತು 20ರಂದು ಕಟೀಲು ಪರಿಸರದಲ್ಲಿ ವಾಹನ ಸಂಚಾರದಲ್ಲಿ ತಾತ್ಕಾಲಿಕವಾಗಿ ಮಾರ್ಪಡು ಮಾಡಲಾಗಿದೆ.

ಕಟಿಲು ಮುಖ್ಯರಸ್ತೆ (ರಥ ಬಿದಿ)ಯಲ್ಲಿ ಮಲ್ಲಿಗೆ ಅಂಗಡಿ ಕ್ರಾಸ್‌ನಿಂದ ದುರ್ಗಾ ಸಂಜೀವಿನಿ ಆಸ್ಪತ್ರೆ ಜಂಕ್ಷನ್ (ಕಲ್ಲಕುಮೇರು ಕ್ರಾಸ್)ವರೆಗೆ ವಾಹನ ಸಂಚಾರ ನಿಲುಗಡೆ ನಿಷೇಧಿಸಿದೆ. ಮಂಗಳೂರಿನಿಂದ ಕಟೀಲಿಗೆ ಬರುವ ವಾಹನಗಳು ಮಲ್ಲಿಗೆ ಅಂಗಡಿ ಕ್ರಾಸ್ ಬಳಿ ಎಡಕ್ಕೆ ಚಲಿಸಿ, ಗಿಡಿಗೆರೆ ರಸ್ತೆ ಮೂಲಕ ಕಟೀಲು ಪಾರ್ಕಿಂಗ್ ಸ್ಥಳಗಳಿಗೆ ಚಲಿಸಬೇಕು. ಕಟೀಲಿನಿಂದ ಮಂಗಳೂರಿಗೆ ಬರುವ ವಾಹನಗಳು ಕಟೀಲು ಪದವಿ ಪೂರ್ವ ಕಾಲೇಜು ಮೈದಾನದ ಪಕ್ಕದ ರಸ್ತೆಯ ಮೂಲಕ ಬ್ಯಾಂಕ್ ಆಫ್ ಬರೋಡಾ ಎದುರುಗಡೆ ರಸ್ತೆಯಲ್ಲಿ ಚಲಿಸಿ ಬಜಪೆ-ಮಂಗಳೂರು ಕಡೆಗೆ ಸಂಚರಿಸಬೇಕು. ಸರ್ವಿಸ್ ಬಸ್, ಟೂರಿಸ್ಟ್ ಬಸ್, ಕಾರು ಮತ್ತಿತರ ವಾಹನಗಳಿಗೆ ಬಸ್ ಸ್ಟ್ಯಾಂಡ್ ಹಿಂದುಗಡೆ ಇರುವ ಸಿತ್ಲಾ ಮೈದಾನ ಹಾಗೂ ಕಟೀಲು ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ಹಾಗೂ ಅಪರ ದಂಡಾಧಿ ಕಾರಿಗಳು ಆಗಿರುವ ಅನುಪಮ್ ಅಗ್ರವಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.