ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆ.ಜಿ ವಾಣಿಜ್ಯ ಸಿಲಿಂಡರ್ ಮತ್ತು 5 ಕೆ.ಜಿ ಎಫ್ಟಿಎಲ್ (Free Trade LPG) ಸಿಲಿಂಡರ್ಗಳ ಬೆಲೆಯನ್ನು ಕಡಿಮೆ ಮಾಡಿವೆ ಎಂದು ಮೂಲಗಳು ತಿಳಿಸಿವೆ.
ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆ.ಜಿ ವಾಣಿಜ್ಯ ಸಿಲಿಂಡರ್ ಮತ್ತು 5 ಕೆ.ಜಿ ಎಫ್ಟಿಎಲ್ (Free Trade LPG) ಸಿಲಿಂಡರ್ಗಳ ಬೆಲೆಯನ್ನು ಕಡಿಮೆ ಮಾಡಿವೆ ಎಂದು ಮೂಲಗಳು ತಿಳಿಸಿವೆ.
19 ಕೆ.ಜಿ ವಾಣಿಜ್ಯ ಸಿಲಿಂಡರ್ಗೆ ₹ 30.50 ಇಳಿಕೆಯಾಗಿದ್ದು, 5 ಕೆ.ಜಿ ಎಫ್ಟಿಎಲ್ ಸಿಲಿಂಡರ್ ಬೆಲೆ ₹7.50 ಇಳಿಕೆಯಾಗಿದೆ.
ಕಳೆದ ತಿಂಗಳು, ಪ್ರಧಾನಿ ನರೇಂದ್ರ ಮೋದಿ ಅವರು ಗೃಹಬಳಕೆಯ 14 ಕೆ.ಜಿ ಯ ಸಿಲಿಂಡರ್ಗಳ ಬೆಲೆಯನ್ನು ₹100 ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಇದು ಮಹಿಳಾ ದಿನಾಚರಣೆಯ ಉಡುಗೊರೆಯೂ ಆಗಲಿದೆ ಎಂದು ಪ್ರಧಾನಿ ಮೋದಿ ಎಕ್ಸ್ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದರು.
'ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಆರ್ಥಿಕ ಹೊರೆಯನ್ನು ಇದು ಗಮನಾರ್ಹವಾಗಿ ತಗ್ಗಿಸಲಿದೆ ಮತ್ತು ನಾರಿ ಶಕ್ತಿಗೆ ಪ್ರಯೋಜನವಾಗಲಿದೆ' ಎಂದು ಅವರು ಹೇಳಿದ್ದರು.