ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವು ಪುರೋಗತಿಯಲ್ಲಿ ಭರದಿಂದ ಸಾಗುತ್ತಿದೆ. ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯದ ಆರ್ಥಿಕ ಸಂಪನ್ಮೂಲಕ್ಕಾಗಿ ಹಮ್ಮಿಕೊಂಡ ನಿಧಿ ಕೂಪನ್ ಡ್ರಾ ಮತ್ತು ಧಾರ್ಮಿಕ ಸಮಾರಂಭ ಮೇ1ರಂದು ಬುಧವಾರ ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ. ಲೋಕಕಲ್ಯಾಣಾರ್ಥವಾಗಿ ಶತರುದ್ರಾಭಿಷೇಕ, ಸಾಮೂಹಿಕ ಸತ್ಯನಾರಾಯಣ ಪೂಜೆ, ಸಾಮೂಹಿಕ ಬಲಿಪೂಜೆ, ಸಾಮೂಹಿಕ ಪ್ರಾರ್ಥನೆ ನಡೆಯಲಿದೆ.
ಕಾರ್ಯಕ್ರಮಗಳು :
ಬೆಳಗ್ಗೆ 6.30ಕ್ಕೆ ಗಣಪತಿ ಹೋಮ, ಶ್ರೀ ದೇವರಿಗೆ ಶತರುದ್ರಾಭಿಷೇಕ, 9 ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭ, 10 ಕ್ಕೆ ಸಭಾ ಕಾರ್ಯಕ್ರಮ, ಧಾರ್ಮಿಕ ಸಭೆ, ನಿಧಿಕೂಪನ್ ಡ್ರಾ ನಡೆಯಲಿದೆ.
ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ. ವಸಂತ ಪೈ, ಬದಿಯಡ್ಕ ಅಧ್ಯಕ್ಷತೆ ವಹಿಸುವರು. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು, ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಉದ್ಯಮಿ ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಉದ್ಘಾಟಿಸುವರು. ಕ್ಷೇತ್ರ ತಂತ್ರಿಗಳಾದ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು, ಮುಂಡಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಕೆ.ಶೆಟ್ಟಿ, ದೈವಜ್ಞ ಪದ್ಮನಾಭ ಶರ್ಮ, ಉದ್ಯಮಿ ಗೋಪಾಲಕೃಷ್ಣ ಪೈ ಬದಿಯಡ್ಕ, ಕೆ.ಪಿ.ರೈ ಕುತ್ತಿಕ್ಕಾರು, ಆರ್.ಕೆ.ನಾಯರ್, ಶಿವಶಂಕರ ನೆಕ್ರಾಜೆ, ಗಂಗಾಧರನ್ ನಾಯರ್, ಮಧುಕರ ರೈ ಕೊರೆಕ್ಕಾನ, ಬಿ. ಜೆ. ಶರ್ಮಾ ಬೆಂಗಳೂರು, ಡಾ. ನಾಗರಾಜ ಭಟ್ ಕಾಸರಗೋಡು, ಶಂಕರ ಸಾರಡ್ಕ, ನಿತೀಶ್ ಶೆಣೈ ಬದಿಯಡ್ಕ, ಯೋಜನಾಧಿಕಾರಿ ಮುಖೇಶ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಐ. ವಿ. ಭಟ್ ಗೌರವಾಧ್ಯಕ್ಷರು, ಶ್ರೀ ಉದನೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ, ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. 12 ಗಂಟೆಗೆ ನಿಧಿ ಕೂಪನ್ ಡ್ರಾ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನದಾನ ನಡೆಯಲಿದೆ. ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀಕ್ಷೇತ್ರದ ಜೀರ್ಣೋದ್ಧಾರ ಕಾರ್ಯಕ್ಕೆ ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.