ಕುಂಬಳೆ: ಲೋಕಸಭಾ ಚುನಾವಣಾ ಪ್ರಚಾರ ಭಾಗವಾಗಿ ಯುವ ಮೋರ್ಚಾ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ವತಿಯಿಂದ ಯುವ ಜ್ವಾಲಾ 2024 ಕುಂಬಳೆ ಸೇವಾ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.
ಯುವಮೋರ್ಚಾ ಕುಂಬಳೆ ಮಂಡಲ ಅಧ್ಯಕ್ಷ ಅವಿನಾಶ್ ಕಾರಂತ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಕಾಸರಗೋಡು ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಿ, ಚುನಾವಣೆಯಲ್ಲಿ ಯುವಜನರ ಪ್ರಾಮುಖ್ಯತೆಯನ್ನು ವಿವರಿಸಿದರು. ಕಾಸರಗೋಡು ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಎಂ.ಎಲ್ ಅಶ್ವಿನಿ ಉಪಸ್ಥಿತರಿದ್ದು ಮಾತನಾಡಿದರು.
ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಅಂಜು ಜೋಸ್ಟಿ, ಬಿಜೆಪಿ ಕಾಸರಗೋಡು ಜಿಲ್ಲಾ ಉಪಾಧ್ಯಕ್ಷ ಸುಧಾಮ ಗೋಸಾಡ,ಬಿಜೆಪಿ ಉತ್ತರ ವಲಯ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಶೆಟ್ಟಿ ಪೂಕಟ್ಟೆ, ರಾಜ್ಯ ಕೌನ್ಸಿಲ್ ಸದಸ್ಯ ವಿ ರವೀಂದ್ರನ್ ಕುಂಬಳೆ ಮಾತನಾಡಿದರು.
ಪಕ್ಷದ ರಾಜ್ಯ ಸಮಿತಿ ಸದಸ್ಯ ಕೋಳಾರು ಸತೀಶ್ಚಂದ್ರ ಭಂಡಾರಿ, ಎಸ್ .ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎ.ಕೆ ಕಯ್ಯಾರ್, ಮಂಜೇಶ್ವರ ವಿಧಾನಸಭಾ ಎನ್.ಡಿ.ಎ ಚುನಾವಣಾ ಸಮಿತಿ ಅಧ್ಯಕ್ಷ ಗೋಪಾಲ್ ಶೆಟ್ಟಿ ಅರಿಬೈಲು, ಕುಂಬಳೆ ಮಂಡಲ ಅಧ್ಯಕ್ಷ ಸುನಿಲ್ ಅನಂತಪುರ, ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ., ವಸಂತ ಕುಮಾರ್ ಮಯ್ಯ, ಅನಿಲ್ ಮಣಿಯಂಪಾರೆ, ಸುಧಾಕರ್ ಕಾಮತ್, ಧನರಾಜ್ ಪ್ರತಾಪ್ ನಗರ, ಸುಜಿತ್ ರೈ ಕುಂಬಳೆ, ಸುಮಿತ್ ರಾಜ್ ಎ. ಸಿ, ಲೋಹಿತ್ ಬಂಬ್ರಾಣ, ಅಜಿತ್ ಕುಂಬಳೆ, ಸಚಿನ್ ಎಣ್ಮಕಜೆ ಹಾಗೂ ಪಕ್ಷದ ಚುನಾಯಿತ ಜನಪ್ರತಿನಿಧಿಗಳು, ಯುವಮೋರ್ಚಾ ಕಾರ್ಯಕರ್ತರು ಭಾಗವಹಿಸಿದ್ದರು.
ಮಂಗಲ್ಪಾಡಿ ಪಂಚಾಯತಿ ಯುವಮೋರ್ಚಾ ಅಧ್ಯಕ್ಷ ಶ್ರೀಜಿತ್ ಪ್ರತಾಪ್ ನಗರ ಸ್ವಾಗತಿಸಿ, ಕುಂಬಳೆ ಗ್ರಾಮ ಪಂಚಾಯತ್ ಸದಸ್ಯ ಮೋಹನ ಬಂಬ್ರಾಣ ಕಾರ್ಯಕ್ರಮ ನಿರೂಪಿಸಿದರು. ಯುವ ಮೋರ್ಚಾ ಮಂಜೇಶ್ವರ ಮಂಡಲ ಅಧ್ಯಕ್ಷ ರಕ್ಷಣ್ ಅಡಕಳ ವಂದಿಸಿದರು.