ಮುಂಬೈ: ವೈದ್ಯಕೀಯ ಕಾರಣಗಳಿಂದಾಗಿ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ಕೋರಿದ್ದ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್ ಅವರ ಮನವಿಯನ್ನು ಮುಂಬೈನ ವಿಶೇಷ ನ್ಯಾಯಾಲಯ ಅಂಗೀಕರಿಸಿದೆ. ಆದರೆ ಏ.25ರಂದು ಹಾಜರಾಗಲು ವಿಫಲವಾದರೆ ಅಗತ್ಯ ಆದೇಶ ನೀಡಲಾಗುವುದು ಎಂದು ಎಚ್ಚರಿಸಿದೆ.

2008ರ ಸೆ.29ರಂದು ಮಾಲೆಗಾಂವ್‌ನ ಮಸೀದಿಯೊಂದರ ಬಳಿ ದ್ವಿಚಕ್ರ ವಾಹನಕ್ಕೆ ಕಟ್ಟಿದ್ದ ಸ್ಫೋಟಕವು ಸ್ಫೋಟಗೊಂಡಿದ್ದರಿಂದ ಆರು ಜನರು ಸಾವನ್ನಪ್ಪಿದ್ದರು. ಘಟನೆಯಲ್ಲಿ 100 ಜನ ಗಾಯಗೊಂಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಗ್ಯಾ ಅವರು ವಿಚಾರಣೆಗೆ ಹಾಜರಾಗಬೇಕಿತ್ತು. ಶನಿವಾರ ಪ್ರಕರಣದ ವಿಚಾರಣೆ ಪ್ರಕ್ರಿಯೆಯು ಆರಂಭವಾದಾಗ ಪ್ರಗ್ಯಾ, 'ತಾನು ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವುದಾಗಿ ತಿಳಿಸಿ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡುವಂತೆ' ಕೋರಿ ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದರು.
ಏ.25ರಂದು ನ್ಯಾಯಾಲಯದ ಮುಂದೆ ಹಾಜರಾಗುವ ಭರವಸೆ ಇದೆ ಎಂದು ಮನವಿಯಲ್ಲಿ ಪ್ರಗ್ಯಾ ತಿಳಿಸಿದ್ದಾರೆ. ಆದರೂ ಅವರು ಒದಗಿಸಿರುವ ವೈದ್ಯಕೀಯ ದಾಖಲೆಯಲ್ಲಿ ಪ್ರಗ್ಯಾ ಭೋಪಾಲ್‌ನಿಂದ ಮುಂಬೈಗೆ ಪ್ರಯಾಣಿಸುವುದು ಸಾಧ್ಯವಿಲ್ಲ ಎಂಬುದನ್ನು ನಮೂದಿಸಿಲ್ಲ ಎಂದು ಎನ್‌ಐಎ ಮನವಿಯನ್ನು ವಿರೋಧಿಸಿತು. ಬಳಿಕ ಏ.25 ಅಥವಾ ಅದರ ಒಳಗಾಗಿ ಹಾಜರಾಗಬೇಕೆಂದು ನಿರ್ದೇಶನ ನೀಡಿತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ವಿಚಾರಣೆಯಲ್ಲಿ ಪ್ರಗ್ಯಾ ಅವರು ನ್ಯಾಯಾಲಯದಲ್ಲಿ ಹಾಜರಾಗಬೇಕಿತ್ತು. ಆದರೆ, ಅವರ ಆರೋಗ್ಯ ಸ್ಥಿತಿಯ ಕುರಿತು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಸಲ್ಲಿಸಿದ ವರದಿಯನ್ನು ಆಧರಿಸಿ ವಿಶೇಷ ಎನ್‌ಐಎ ನ್ಯಾಯಾಧೀಶರಾದ ಎ.ಕೆ ಲಹೋಟಿ ಅವರು ಪ್ರಗ್ಯಾ ಅವರಿಗೆ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡಿದ್ದರು. ಅಲ್ಲದೇ ಏ.20ರಂದು ನ್ಯಾಯಾಲಯದ ಮುಂದೆ ತಪ್ಪದೇ ಹಾಜರಾಗುವಂತೆ ಸೂಚಿಸಿದ್ದರು.