ಛತ್ತೀಸಗಢ: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ನಡೆಸಿದ ಜಂಟಿ ಎನ್‌ಕೌಂಟರ್‌ನಲ್ಲಿ ನಕ್ಸಲ್ ನಾಯಕ ಶಂಕರ್ ರಾವ್ ಸೇರಿದಂತೆ 29 ಮಂದಿ ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಂಕರ್ ರಾವ್ ಕುರಿತು ಮಾಹಿತಿ ನೀಡಿದವರಿಗೆ ₹25 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ನಕ್ಸಲರ ಬಳಿಯಿದ್ದ 7 ಎಕೆ-47 ರೈಫಲ್, ಮೂರು ಲಘು ಮಷಿನ್‌ಗನ್ ಸೇರಿದಂತೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ.