ಕಾಬೂಲ್: ಮೂರು ದಿನಗಳಿಂದ ಸುರಿದ ಭಾರಿ ಮಳೆಗೆ ಅಫ್ಗಾನಿಸ್ತಾನದಲ್ಲಿ ಉಂಟಾದ ಹಠಾತ್ ಪ್ರವಾಹಕ್ಕೆ ಕನಿಷ್ಠ 33 ಮಂದಿ ಮೃತಪಟ್ಟಿದ್ದು, 27 ಜನರು ಗಾಯಗೊಂಡಿದ್ದಾರೆ ಎಂದು ನೈಸರ್ಗಿಕ ವಿಪತ್ತು ನಿರ್ವಹಣೆಯ ರಾಜ್ಯ ಸಚಿವಾಲಯದ ವಕ್ತಾರ ಅಬ್ದುಲ್ಲಾ ಜನನ್ ಸಾಯಿಕ್ ತಿಳಿಸಿದರು.

ರಾಜಧಾನಿ ಕಾಬೂಲ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪ್ರವಾಹ ಸಂಭವಿಸಿದೆ. ಪಶ್ಚಿಮ ಫರಾಹ್, ಹೆರಾತ್, ದಕ್ಷಿಣ ಝಬುಲ್ ಮತ್ತು ಕಂದಹಾರ್ ಅತಿ ಹೆಚ್ಚು ಹಾನಿಗೊಳಗಾದ ಪ್ರಾಂತ್ಯಗಳಲ್ಲಿ ಸೇರಿವೆ ಎಂದು ಅವರು ಹೇಳಿದರು.
ಸುಮಾರು 200 ಜಾನುವಾರುಗಳು ಸತ್ತರೆ, 600ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಪ್ರವಾಹದಿಂದ ಸುಮಾರು 800 ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆ ನಷ್ಟವಾಗಿದೆ. ರಸ್ತೆಗಳಿಗೂ ಹಾನಿಯಾಗಿದೆ ಎಂದು ತಿಳಿಸಿದರು.
ಅಫ್ಗಾನಿಸ್ತಾನದ 34 ಪ್ರಾಂತ್ಯಗಳಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.