ತಿರುವನಂತಪುರಂ: ರಾಜ್ಯದಲ್ಲಿ ಬಿಸಿಲಿನ ಝಳ ಇನ್ನಷ್ಟು ಹೆಚ್ಚಳವಾಗುವ ಬಗ್ಗೆ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ತಿರುವನಂತಪುರಂ, ಇಡುಕ್ಕಿ ಮತ್ತು ವಯನಾಡ್ ಹೊರತುಪಡಿಸಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊಲ್ಲಂ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ವರೆಗೆ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ತ್ರಿಶೂರ್‍ನಲ್ಲಿ 38 ಡಿಗ್ರಿ ಸೆಲ್ಸಿಯಸ್ ಮತ್ತು ಅಲಪ್ಪುಳ, ಪತ್ತನಂತಿಟ್ಟ, ಕೊಟ್ಟಾಯಂ ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ 37 ಡಿಗ್ರಿ ಸೆಲ್ಸಿಯಸ್‍ಗೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಏಪ್ರಿಲ್ 9ರವರೆಗೆ ತಾಪಮಾನದ ಎಚ್ಚರಿಕೆ ನೀಡಲಾಗಿದೆ. ಹೆಚ್ಚಿನ ತಾಪಮಾನ ಮತ್ತು ಆದ್ರ್ರ ಗಾಳಿಯು ಅಹಿತಕರ ಹವಾಮಾನ ಪರಿಸ್ಥಿತಿಗಳನ್ನು ಸೃಷ್ಟಿಸಲಿದೆ.