ಅಗರ್ತಲಾ: ದೇಶದಾದ್ಯಂತ ಬಿಸಿಗಾಳಿಯ ಹೊಡೆತಕ್ಕೆ ಜನ ತತ್ತರಿಸಿದ್ದಾರೆ. ತ್ರಿಪುರಾದಲ್ಲಿ ಸರಾಸರಿ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಏ.24ರಿಂದ 27ರವರೆಗೆ ರಾಜ್ಯದ ಎಲ್ಲಾ ಶಾಲೆಗಳನ್ನು ಬಂದ್ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ವಾರದ ಅಂತ್ಯದ ಹೊತ್ತಿಗೆ ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಬಿಸಿಗಾಳಿ ಮತ್ತು ಆರ್ದ್ರತೆ ಪರಿಸ್ಥಿತಿ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿದೆ. ಹೀಗಾಗಿ ರಾಜ್ಯ ಸರ್ಕಾರ, ಇದು 'ರಾಜ್ಯದ ನಿರ್ದಿಷ್ಟ ವಿಪತ್ತಿನ ಸಮಯ' ಎಂದು ಘೋಷಿಸಿದೆ. ಎಲ್ಲಾ ಜಿಲ್ಲೆಗಳಲ್ಲಿ ಬಿಸಿಗಾಳಿಯ ಬಗ್ಗೆ ಜಾಗೃತಿ ಮೂಡಿಸಲು ಸೂಚಿಸಲಾಗಿದೆ ಎಂದು ಶಿಕ್ಷಣ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಎನ್.ಸಿ. ಶರ್ಮಾ ಹೇಳಿದ್ದಾರೆ.
ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಅನಗತ್ಯವಾಗಿ ಮನೆಯಿಂದ ಹೊರೆಗೆ ಬರುವುದನ್ನು ತಪ್ಪಿಸಿ ಎಂದು ಜನರಿಗೆ ಸಲಹೆ ನೀಡಿದ್ದಾರೆ.