ನವದೆಹಲಿ: ಮೇ 13 ರಂದು ನಡೆಯಲಿರುವ ನಾಲ್ಕನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರ (ಇಂದು) ಆರಂಭವಾಗಿದೆ. ಚುನಾವಣಾ ಆಯೋಗ ಈ ಕುರಿತು ಅಧಿಸೂಚನೆ ಹೊರಡಿಸಿದೆ.
ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ ಹಾಗೂ 9 ರಾಜ್ಯಗಳ 96 ಕ್ಷೇತ್ರಗಳಿಗೆ ನಾಲ್ಕನೇ ಹಂತದಲ್ಲಿ ಮತದಾನ ನಡೆಯಲಿದೆ.
ಆಂಧ್ರಪ್ರದೇಶ, ತೆಲಂಗಾಣ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಮತದಾನ ನಡೆಯಲಿದೆ.
ಆಂಧ್ರಪ್ರದೇಶದಲ್ಲಿ ಮೇ 13 ರಂದು ಲೋಕಸಭೆ ಚುನಾವಣೆಯೊಂದಿಗೆ ಏಕಕಾಲದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.