ಪೆರ್ಲ: ಪೆರ್ಲ ನಾಲಂದ ಕಾಲೇಜಿನಲ್ಲಿ ಮೇ 4ರಂದು ಉದ್ಯೋಗ ಮೇಳ ನಡೆಯಲಿದೆ. 15ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು 200 ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಶಿಬಿರದಲ್ಲಿ ಭಾಗವಹಿಸುವ ಉದ್ಯೋಗಾರ್ಥಿಗಳಿಗೆ ಪ್ರವೇಶ ಉಚಿತವಾಗಿದ್ದು ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ವೃತ್ತಿಪರ ಕೋರ್ಸ್ ಮಾಡಿದವರಿಗೂ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.