ಅಂಬಾಲಾ: ಪಂಜಾಬ್‌ನ ಪಟಿಯಾಲಾ ಜಿಲ್ಲೆಯ ಶಂಭು ರೈಲ್ವೆ ನಿಲ್ದಾಣದಲ್ಲಿ ನಾಲ್ಕನೇ ದಿನವೂ ರೈತರು ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದರಿಂದ ಅಂಬಾಲಾ-ಅಮೃತಸರ ಮಾರ್ಗದಲ್ಲಿ ಸಂಚರಿಸುವ 54 ರೈಲುಗಳ ಸಂಚಾರವನ್ನು ಶನಿವಾರ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಭಟನೆಯಿಂದ ಕಳೆದ ಮೂರು ದಿನಗಳಲ್ಲಿ 380 ರೈಲುಗಳ ಸಂಚಾರಕ್ಕೆ ಅಡ್ಡಿಯಾಗಿದ್ದು, ಪ್ರಯಾಣಿಕರಿಗೆ ಅನಾನುಕೂಲವಾಗಿದೆ ಎಂದು ಅವರು ಹೇಳಿದ್ದಾರೆ.
ಬಂಧಿತ ರೈತರ ಬಿಡುಗಡೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯ ರಹಿತ) ಹಾಗೂ ಕಿಸಾನ್ ಮಜ್ದೂರ್ ಮೋರ್ಚಾದ (ಕೆಎಂಎಂ) ನೇತೃತ್ವದಲ್ಲಿ ಬುಧವಾರದಿಂದ ರೈತರ ಪ್ರತಿಭಟನೆ ನಡೆದಿದೆ.
ಹರಿಯಾಣ ಪೊಲೀಸರು ಬಂಧಿಸಿರುವ ಮೂವರು ರೈತರನ್ನು ಬಿಡುಗಡೆ ಮಾಡುವ ತನಕ ಪ್ರತಿಭಟನೆ ಮುಂದುವರಿಯಲಿದೆ ಎಂದು ರೈತ ಮುಖಂಡ ಸರವಣ ಸಿಂಗ್ ಪಂಢೇರ ಹೇಳಿದ್ದಾರೆ.