ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ಕಂಪನಿ ಘಟಕದ ರಾಸಾಯನಿಕ ರಿಯಾಕ್ಟರ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ಕಂಪನಿ ಘಟಕದ ರಾಸಾಯನಿಕ ರಿಯಾಕ್ಟರ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಜಿಲ್ಲೆಯ ಹತ್ತನೂರ ಮಂಡಲದ ಚಂದಾಪುರ ಗ್ರಾಮದಲ್ಲಿರುವ ಎಸ್‌ಬಿ ಆರ್ಗಾನಿಕ್ಸ್ ಲಿಮಿಟೆಡ್‌ನ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿದ್ದರು.
ಗುರುವಾರ ಕಾರ್ಖಾನೆಯ ಆವರಣದಲ್ಲಿ ಅವಶೇಷಗಳಡಿ ಒಬ್ಬ ಕಾರ್ಮಿಕನ ಶವ ಪತ್ತೆಯಾಗಿದ್ದು, ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಬುಧವಾರ ರಾತ್ರಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಸಂಸ್ಥೆಯ ನಿರ್ದೇಶಕ ಮತ್ತು ಘಟಕದ ಕಾರ್ಮಿಕರೂ ಸೇರಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮೃತರು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಮಧ್ಯಪ್ರದೇಶ ಮೂಲದವರು.
ಘಟನೆಯಲ್ಲಿ ಗಾಯಗೊಂಡ 16 ಮಂದಿಯನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಸ್ಫೋಟಕ್ಕೆ ಕಾರಣವನ್ನು ತನಿಖೆ ನಡೆಸಲಾಗುತ್ತಿದ್ದು, ಕಂಪನಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.