ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಸೇರಿದ ಪುಣೆಯಲ್ಲಿರುವ ಬಂಗಲೆ, ಈಕ್ವಿಟಿ ಷೇರುಗಳು ಸೇರಿದಂತೆ ₹98 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಗುರುವಾರ ಜಪ್ತಿ ಮಾಡಿದೆ.

ರಾಜ್ ಅವರ ಹೆಸರಿನಲ್ಲಿರುವ ಮುಂಬೈನ ಜುಹುನಲ್ಲಿರುವ ವಸತಿ ಫ್ಲಾಟ್ ಮತ್ತು ಪುಣೆಯಲ್ಲಿರುವ ವಸತಿ ಬಂಗಲೆ ಮತ್ತು ಕುಂದ್ರಾ ಅವರ ಹೆಸರಿನಲ್ಲಿರುವ ಈಕ್ವಿಟಿ ಷೇರುಗಳನ್ನು ಜಪ್ತಿ ಮಾಡಲಾಗಿದೆ ಎಂದು ಫೆಡರಲ್ ಏಜೆನ್ಸಿ ಹೇಳಿಕೆಯಲ್ಲಿ ತಿಳಿಸಿದೆ.