ಜಮ್ಮು: 'ಜಮ್ಮು ಮತ್ತು ಕಾಶ್ಮೀರದ ಕಠುವಾದ ಬಳಿ ಇರುವ ಸರ್ಕಾರಿ ವೈದ್ಯಕೀಯ ಕಾಲೇಜಿನ ಸಮೀಪ ನಡೆದ ಎನ್‌ಕೌಂಟರ್‌ನಲ್ಲಿ ಪಾತಿಕಿಯೊಬ್ಬನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ' ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಜಮ್ಮು: 'ಜಮ್ಮು ಮತ್ತು ಕಾಶ್ಮೀರದ ಕಠುವಾದ ಬಳಿ ಇರುವ ಸರ್ಕಾರಿ ವೈದ್ಯಕೀಯ ಕಾಲೇಜಿನ ಸಮೀಪ ನಡೆದ ಎನ್‌ಕೌಂಟರ್‌ನಲ್ಲಿ ಪಾತಿಕಿಯೊಬ್ಬನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ' ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
'ವಾಸುದೇವ್ ಮೃತ ಪಾತಕಿ. ಈತ ರಾಮಗಢ ಪೊಲೀಸ್ ಠಾಣೆಯಲ್ಲಿ ದಾಖಲಾದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಕಾಗಿದ್ದ ವ್ಯಕ್ತಿಯಾಗಿದ್ದ.
'ಎನ್‌ಕೌಂಟರ್ ಸಂದರ್ಭದಲ್ಲಿ ತಲೆಗೆ ಗಾಯವಾಗಿದ್ದ ಎಸ್‌ಐ ದೀಪಕ್ ಶರ್ಮಾ ಎಂಬುವವರು ಆಸ್ಪತ್ತೆಯಲ್ಲಿ ಚಿಕಿತ್ಸೆ ಪಡೆಯುವಾಗ ಮೃತಪಟ್ಟಿದ್ದಾರೆ. ಮತ್ತೊಬ್ಬ ವಿಶೇಷ ಪೊಲೀಸ್ ಅಧಿಕಾರಿ ಅನಿಲ್ ಕುಮಾರ್ ಎಂಬುವವರೂ ಗಾಯಗೊಂಡಿದ್ದಾರೆ' ಎಂದು ಅವರು ಮಾಹಿತಿ ನೀಡಿದ್ದಾರೆ.
'ವಾಸುದೇವ್, ಕುಖ್ಯಾತ ಶುನೂ ಗುಂಪಿನ ನಾಯಕ. ಗುಂಡಿನ ಚಕಮಕಿ ವೇಳೆ ಈತನ ಸಹಚರನೊಬ್ಬ ಗಾಯಗೊಂಡಿದ್ದಾನೆ' ಎಂದರು.