ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆ ಸೇರಿ ಉತ್ತರ ಭಾರತದ ಕೆಲವೆಡೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 5.3ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆ ಸೇರಿ ಉತ್ತರ ಭಾರತದ ಕೆಲವೆಡೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 5.3ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ರಾತ್ರಿ 9.34ರ ಸುಮಾರಿಗೆ ಭೂಕಂಪ ಸಂಭವಿಸಿದೆ ಎಂದು ಅದು ತಿಳಿಸಿದೆ.
ಚಂಡೀಗಡ ಸೇರಿದಂತೆ ಪಂಜಾಬ್ ಮತ್ತು ಹರಿಯಾಣದ ಕೆಲ ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಕೆಲವು ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ.
'ಕೆಲ ಸೆಕೆಂಡ್ಗಳ ಕಾಲ ಭೂಮಿ ನಡುಗುವ ಅನುಭವವಾಯಿತು. ನಾನು ಗಾಬರಿಯಿಂದ ಕೆಳಮಹಡಿಗೆ ಓಡುವಷ್ಟರಲ್ಲಿ ಕಂಪನ ನಿಂತಿತ್ತು' ಎಂದು ಚಂಡೀಗಢದ ನಿವಾಸಿ ಸಂಜಯ್ ಕುಮಾರ್ ಹೇಳಿದ್ದಾರೆ.