ಕಣ್ಣೂರು: ಪನ್ನೂರು ಪೆÇಲೀಸ್ ಠಾಣಾ ವ್ಯಾಪ್ತಿಯ ಮುಳ್ಯತ್ತೋಡ್‍ನಲ್ಲಿ ಬಾಂಬ್ ಸ್ಫೋಟದಲ್ಲಿ ಓರ್ವ ಗಾಯಗೊಂಡು ಸಾವನ್ನಪ್ಪಿದ್ದಾರೆ. ಕೈವೇಲಿಕಲ್ ಮೂಲದ ಶೆರಿನ್ (26) ಮೃತರು.
ಕೋಝಿಕ್ಕೋಡ್‍ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡಿರುವ ವಿನೀಶ್ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಶೆರಿನ್ ಮತ್ತು ವಿನೀಶ್ ಸಿಪಿಎಂ ಕಾರ್ಯಕರ್ತರು.
ಮುಳಿಯತ್ತೋಡ್ ಮರದ ಗಿರಣಿ ಬಳಿ ಇಂದು ಬೆಳಗ್ಗೆ ಹಿಂಸಾತ್ಮಕ ಸ್ಫೋಟ ಸಂಭವಿಸಿದೆ. ಬಾಂಬ್ ತಯಾರಿಕೆ ವೇಳೆ ಸ್ಫೋಟ ಸಂಭವಿಸಿದೆ ಎಂದು ಪೋಲೀಸರು ತಿಳಿಸಿದ್ದಾರೆ. ಸ್ಫೋಟದಲ್ಲಿ ವಿನೀಶ್ ಅವರ ಕೈಗಳು ತುಂಡಾಗಿದ್ದು, ಶೆರಿನ್ ಮುಖಕ್ಕೆ ಗಾಯವಾಗಿದೆ.
ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ಕರೆತಂದಿದ್ದಾರೆ. ಸ್ಫೋಟದ ಸ್ಥಳದಲ್ಲಿ ವಿಧಿವಿಜ್ಞಾನ ತಜ್ಞರು ಮತ್ತು ಪೋಲೀಸರು ಪರೀಕ್ಷೆ ನಡೆಸುತ್ತಿದ್ದಾರೆ.