HEALTH TIPS

ಪ್ರಧಾನಿ ಮೋದಿ ಭರವಸೆ ಜನರನ್ನು ಸಂಕಷ್ಟದಿಂದ ಪಾರು ಮಾಡಲಿದೆ: ಸಚಿವ ರಾಜನಾಥ್ ಸಿಂಗ್

          ಭೋಪಾಲ್‌/ಸಿಂಗ್ರೌಲಿಬಿಜೆಪಿಯವರು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಭರವಸೆಯು ದೇಶದ ಜನರನ್ನು ಸಂಕಷ್ಟದಿಂದ ಪಾರು ಮಾಡಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

             ಮಧ್ಯಪ್ರದೇಶದ ಸಿಧಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್‌ ಮಿಶ್ರಾ ಅವರ ಪರ ಚುನಾವಣಾ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 'ಕಾಂಗ್ರೆಸ್‌ ನೇತೃತ್ವದ ಯುಪಿಎ ಆಡಳಿತವು ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಆ ಸಮಯದಲ್ಲಿ ಕೆಲವು ಮಂತ್ರಿಗಳು ಜೈಲು ಪಾಲಾದರು' ಎಂದು ಹೇಳಿದ್ದಾರೆ.

              'ಪ್ರಧಾನಿ ನರೇಂದ್ರ ಮೋದಿ ಅವರು ಸತ್ಯವನ್ನೇ ಮಾತನಾಡುತ್ತಾರೆ. ಜನರನ್ನು ಸಮಸ್ಯೆಗಳು ಮತ್ತು ಸಂಕಷ್ಟಗಳಿಂದ ಪಾರು ಮಾಡುವುದು ಮೋದಿ ಅವರ ಭರವಸೆಯಾಗಿದೆ. ಬಿಜೆಪಿ ಹೇಳಿದ್ದನ್ನೇ ಮಾಡುತ್ತದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತದೆ. ಭಾರತೀಯ ಜನ ಸಂಘದ ಕಾಲದಿಂದಲೂ ನಾವು ನಮ್ಮ ಮಾತನ್ನು ಉಳಿಸಿಕೊಂಡಿದ್ದೇವೆ' ಎಂದು ಅವರು ಹೇಳಿದ್ದಾರೆ.

             ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಪ್ರತಿಯೊಂದು ಭರವಸೆಯನ್ನು ಈಡೇರಿಸಿದೆ. ರಾಮ ಮಂದಿರ ನಿರ್ಮಾಣ ಕುರಿತ ನಮ್ಮ ಬದ್ಧತೆಯನ್ನು ಅಪಹಾಸ್ಯ ಮಾಡಲಾಗಿತ್ತು. ಆದರೆ, ನಾವು ಅದನ್ನು ನಿರ್ಮಿಸಿದ್ದೇವೆ. ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ್ದೇವೆ. ವಿರೋಧ ಪಕ್ಷಗಳು ನಿಷ್ಪ್ರಯೋಜಕವಾಗಿದ್ದು ದ್ವೇಷ ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿವೆ ಎಂದು ಸಿಂಗ್‌ ವಾಗ್ದಾಳಿ ನಡೆಸಿದ್ದಾರೆ.

             ಬಿಜೆಪಿ ಜನರನ್ನು ಆಳುವುದಿಲ್ಲ ಬದಲಾಗಿ ಅವರಿಗೆ ಸೇವೆಯನ್ನು ಸಲ್ಲಿಸುತ್ತದೆ. ಮೋದಿ ನೇತೃತ್ವದ ಸರ್ಕಾರದ ಅಡಿಯಲ್ಲಿ ದೇಶದ ಗಡಿಗಳು ಸಂಪೂರ್ಣ ಸುರಕ್ಷಿತವಾಗಿವೆ. ಕಳೆದ ಹತ್ತು ವರ್ಷಗಳಲ್ಲಿ ಎನ್‌ಡಿಎ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಯಾವುದೇ ಆರೋಪಗಳು ಕೇಳಿಬಂದಿಲ್ಲ. ಆದರೆ, 2004 ರಿಂದ 2014ರ ನಡುವಿನ ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತವು ಹಲವು ಹಗರಣಗಳಿಂದ ಕೂಡಿತ್ತು. ಹಲವು ಸಚಿವರು ಬಂಧನಕ್ಕೊಳಗಾಗಿದ್ದರು ಎಂದು ಸಿಂಗ್‌ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries