ನವದೆಹಲಿ: ತಮಿಳುನಾಡಿನ ಗ್ರಾಮೀಣ ಅಭಿವೃದ್ಧಿ ಸಚಿವ ಐ. ಪೆರಿಯಸಾಮಿ ಅವರ ವಿರುದ್ಧ ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರು ಇದ್ದ ವಿಭಾಗೀಯ ಪೀಠವು, ತಮ್ಮ ವಿರುದ್ಧ ವಿಚಾರಣೆ ಶುರುಮಾಡುವುದಕ್ಕೆ ವಿಚಾರಣಾ ನ್ಯಾಯಾಲಯಕ್ಕೆ ಮದ್ರಾಸ್ ಹೈಕೋರ್ಟ್ ಆದೇಶಿಸಿದ್ದನ್ನು ಪ್ರಶ್ನಿಸಿ ಪೆರಿಯಸಾಮಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಒಪ್ಪಿದೆ.