ನವದೆಹಲಿ: 'ಬಿಜೆಪಿ ತಾನು ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ಜನರಲ್ಲಿ ವಿಶ್ವಾಸಾರ್ಹತೆಯನ್ನು ಗಳಿಸಿದೆ. ಪ್ರಧಾನಿ ಮೋದಿಯವರ ಗ್ಯಾರಂಟಿಯು ಪರಿಶುದ್ಧ ಚಿನ್ನದಂತೆ' ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ.
ನವದೆಹಲಿ: 'ಬಿಜೆಪಿ ತಾನು ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ಜನರಲ್ಲಿ ವಿಶ್ವಾಸಾರ್ಹತೆಯನ್ನು ಗಳಿಸಿದೆ. ಪ್ರಧಾನಿ ಮೋದಿಯವರ ಗ್ಯಾರಂಟಿಯು ಪರಿಶುದ್ಧ ಚಿನ್ನದಂತೆ' ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ.
ಪಕ್ಷದ 'ಸಂಕಲ್ಪ ಪತ್ರ' ಬಿಡುಗಡೆ ಬಳಿಕ ಮಾತನಾಡಿದ ಸಿಂಗ್, ಬಿಜೆಪಿಯ ಪ್ರಣಾಳಿಕೆಯು ವಿಶ್ವ ರಾಜಕೀಯದಲ್ಲಿ ಚಿನ್ನದಂತೆ ವಿಶಿಷ್ಟತೆಯಿಂದ ಕೂಡಿದೆ ಎಂದರು.
ಮಹಿಳಾ ಮೀಸಲಾತಿ ಜಾರಿ, ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆದಿರುವುದು, ರಾಮ ಮಂದಿರ ನಿರ್ಮಾಣ ಸೇರಿದಂತೆ ಕೇಂದ್ರ ಸರ್ಕಾರ ಕೈಗೊಂಡಿರುವ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಉಲ್ಲೇಖಿಸಿ, ಆಡಳಿತರೂಢ ಬಿಜೆಪಿ ಪಕ್ಷವು ನೀಡಿದ್ದ ಭರವಸೆಗಳನ್ನು ಈಡೇರಿಸಿದೆ ಎಂದು ಹೇಳಿದ್ದಾರೆ.
ಪ್ರಣಾಳಿಕೆ ಸಮಿತಿಯು 15 ಲಕ್ಷಕ್ಕೂ ಹೆಚ್ಚು ಜನರ ಸಲಹೆಗಳನ್ನು ಸ್ವೀಕರಿಸಿದೆ ಎಂದು ಸಿಂಗ್ ಹೇಳಿದ್ದಾರೆ. ಲೋಕಸಭೆ ಚುನಾವಣಾ ಸಂಬಂಧ ರಾಜನಾಥ್ ಸಿಂಗ್ ಅವರು ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿದ್ದಾರೆ.