HEALTH TIPS

ರೈಲ್ವೆ ನಿಲ್ದಾಣಗಳಲ್ಲಿ ಸಾಮಾನ್ಯ ವರ್ಗದ ಪ್ರಯಾಣಿಕರಿಗೆ ಕೈಗೆಟಕುವ ದರದಲ್ಲಿ ಊಟದ ವ್ಯವಸ್ಥೆ!

        ನವದೆಹಲಿ: ಜನರಲ್ ಕಂಪಾರ್ಟ್‌ಮೆಂಟ್‌ಗಳಲ್ಲಿ ಪ್ರಯಾಣಿಸುವ ರೈಲು ಪ್ರಯಾಣಿಕರು ಈಗ ನಿಲ್ದಾಣಗಳಲ್ಲಿ ಕೈಗೆಟುಕುವ ಬೆಲೆಯಲ್ಲಿ ಆರೋಗ್ಯಕರ ಊಟ ಮತ್ತು ತಿಂಡಿಗಳನ್ನು ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

              100 ಕ್ಕೂ ಹೆಚ್ಚು ನಿಲ್ದಾಣಗಳು ಸೇರಿದಂತೆ ಭಾರತೀಯ ರೈಲ್ವೆಯಾದ್ಯಂತ ಸುಮಾರು 150 ಕೌಂಟರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಈ ಸೌಲಭ್ಯವನ್ನು ಮತ್ತಷ್ಟು ವಿಸ್ತರಿಸಲಾಗುವುದು ಅವರು ಮಾಹಿತಿ ನೀಡಿದ್ದಾರೆ.

           ಭಾರತೀಯ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ಜೊತೆಗೆ ಭಾರತೀಯ ರೈಲ್ವೇ ಪ್ರಯಾಣಿಕರಿಗೆ, ವಿಶೇಷವಾಗಿ ಸಾಮಾನ್ಯ ಬೋಗಿಗಳಲ್ಲಿ ತೆರಳುವ ಪ್ರಯಾಣಿಕರಿಗೆ ಕೈಗೆಟುಕುವ ಬೆಲೆಯಲ್ಲಿ ಆರೋಗ್ಯಕರ ಊಟ ಮತ್ತು ಒದಗಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

              ಬೇಸಿಗೆಯ ತಿಂಗಳುಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಸಾಮಾನ್ಯವಾಗಿ ಹೆಚ್ಚಳವಿರುತ್ತದೆ. ಜನರಲ್ ಕಂಪಾರ್ಟ್‌ಮೆಂಟ್‌ಗಳಲ್ಲಿ ತೆರಳುವವರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಇವೆಲ್ಲಾವನ್ನು ಮನಗೊಂಡು ಬಜೆಟ್ ಸ್ನೇಹಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries