ಬದಿಯಡ್ಕ: ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಂದರ್ಭ ಉದ್ಯಮಿ ಗೋಪಾಲಕೃಷ್ಣ ಪೈ ಬದಿಯಡ್ಕ ಅವರು ದೀಪಬೆಳಗಿಸಿ ಉಗ್ರಾಣಮುಹೂರ್ತ ನೆರವೇರಿಸಿದರು. ಅವರ ವತಿಯಿಂದ ಅನ್ನದಾನಕ್ಕೆ ಹಸಿರುವಾಣಿಯನ್ನು ಸಮರ್ಪಿಸಿದರು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ವಿವಿಧ ಸಮಿತಿಗಳ ಸಂಚಾಲಕರು, ಭಗವದ್ಭಕ್ತರು ಉಪಸ್ಥಿತರಿದ್ದರು.