ಶಿಮ್ಲಾ: ನಟಿ ಕಂಗನಾ ರನೌತ್ ಅವರ ರಾಜಕೀಯ ಪ್ರವೇಶದಿಂದ ಹಿಮಾಚಲ ಪ್ರದೇಶದ ಬಿಜೆಪಿ ನಾಯಕರ ಭವಿಷ್ಯದ ನಿರೀಕ್ಷೆಗಳಿಗೆ ತೊಂದರೆ ಉಂಟಾಗಲಿದೆ ಎಂದು ಲೋಕೋಪಯೋಗಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ.
ಶಿಮ್ಲಾ: ನಟಿ ಕಂಗನಾ ರನೌತ್ ಅವರ ರಾಜಕೀಯ ಪ್ರವೇಶದಿಂದ ಹಿಮಾಚಲ ಪ್ರದೇಶದ ಬಿಜೆಪಿ ನಾಯಕರ ಭವಿಷ್ಯದ ನಿರೀಕ್ಷೆಗಳಿಗೆ ತೊಂದರೆ ಉಂಟಾಗಲಿದೆ ಎಂದು ಲೋಕೋಪಯೋಗಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ.
ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಂಗನಾ ಅವರನ್ನು ಪಕ್ಷ ಘೋಷಿಸಿದೆ.
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ವಿಕ್ರಮಾದಿತ್ಯ ಸಿಂಗ್ ಸೇರಿದಂತೆ ರಾಜಕೀಯದಲ್ಲಿ ಗುರುತಿಸಿಕೊಂಡಿರುವ ಕೆಲವು ಕುಟುಂಬಗಳ ವಿರುದ್ಧ ಕಂಗನಾ ವಾಗ್ದಾಳಿ ನಡೆಸಿದ್ದರು. ಹಿಮಾಚಲ ಪ್ರದೇಶದಲ್ಲಿ ಜೂನ್ 1ರಂದು ಮತದಾನ ನಡೆಯಲಿದೆ.