ನವದೆಹಲಿ: ಇರಾನ್ ಮತ್ತು ಇಸ್ರೇಲ್ ನಡುವೆ ಉದ್ವಿಗ್ನತೆ ಉಲ್ಬಣಗೊಳ್ಳುತ್ತಿರುವ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದ್ದು, ಇದು ಮಧ್ಯಪ್ರಾಚ್ಯದಲ್ಲಿ ಶಾಂತಿ ಮತ್ತು ಭದ್ರತೆಗೆ ಧಕ್ಕೆ ಉಂಟು ಮಾಡುತ್ತಿದೆ ಎಂದು ಹೇಳಿದೆ.
ನವದೆಹಲಿ: ಇರಾನ್ ಮತ್ತು ಇಸ್ರೇಲ್ ನಡುವೆ ಉದ್ವಿಗ್ನತೆ ಉಲ್ಬಣಗೊಳ್ಳುತ್ತಿರುವ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದ್ದು, ಇದು ಮಧ್ಯಪ್ರಾಚ್ಯದಲ್ಲಿ ಶಾಂತಿ ಮತ್ತು ಭದ್ರತೆಗೆ ಧಕ್ಕೆ ಉಂಟು ಮಾಡುತ್ತಿದೆ ಎಂದು ಹೇಳಿದೆ.
ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಭಾರತದ ವಿದೇಶಾಂಗ ಸಚಿವಾಲಯ, 'ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗೆ ಬೆದರಿಕೆಯೊಡ್ಡುತ್ತಿದೆ.
'ಈ ಪ್ರದೇಶದಲ್ಲಿನ ಭಾರತದ ರಾಯಭಾರ ಕಚೇರಿಗಳು ಭಾರತೀಯ ಪ್ರಜೆಗಳೊಂದಿಗೆ ನಿಕಟ ಸಂಪರ್ಕದಲ್ಲಿವೆ' ಎಂದು ಅದು ತಿಳಿಸಿದೆ.
ವಿವೇಚನಾಶೀಲರಾಗಿ ಯೋಚಿಸುವ ಸಮಯ: ಡೆನ್ನಿಸ್ ಫ್ರಾನ್ಸಿಸ್
ಇರಾನ್-ಇಸ್ರೇಲ್ ಉದ್ವಿಗ್ನತೆ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಅಮೆರಿಕ ಜನರಲ್ ಅಸೆಂಬ್ಲಿ ಅಧ್ಯಕ್ಷ ಡೆನ್ನಿಸ್ ಫ್ರಾನ್ಸಿಸ್, 'ಮಧ್ಯಪ್ರಾಚ್ಯದಲ್ಲಿ ಬಿಗಡಾಯಿಸುತ್ತಿರುವ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳವಾಗುತ್ತಿದೆ. ಈ ಪ್ರದೇಶದಲ್ಲಿ ಮತ್ತಷ್ಟು ಉದ್ವಿಗ್ನತೆಯನ್ನು ತಪ್ಪಿಸಲು ಎರಡು ದೇಶಗಳು ಅತ್ಯಂತ ಸಂಯಮದಿಂದ ವರ್ತಿಸಬೇಕಿದೆ. ಈ ಪರಿಸ್ಥಿತಿಯಲ್ಲಿ ವಿವೇಚನಾಶೀಲರಾಗಿ ಯೋಚಿಸುವುದು ಬಹಳ ಮುಖ್ಯವಾಗಿದೆ. ಇದನ್ನು ಇಲ್ಲಿಗೆ ಮುಕ್ತಾಯಗೊಳಿಸುತ್ತಾರೆ ಎಂಬ ನಂಬಿಕೆಯಿದೆ' ಎಂದು ತಿಳಿಸಿದ್ದಾರೆ.