ಮಧ್ಯಪ್ರದೇಶ: ಮಧ್ಯಪ್ರದೇಶದ ಬೇತುಲ್ ಲೋಕಸಭಾ ಕ್ಷೇತ್ರದ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಭ್ಯರ್ಥಿ ಅಶೋಕ್ ಭಾಲವಿ ಮಂಗಳವಾರ ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಶೋಕ್ ಭಾಲವಿ ಮೃತ. ಮಧ್ಯಪ್ರದೇಶದ ಬೇತುಲ್ ಕ್ಷೇತ್ರದಿಂದ ಮಾಯಾವತಿಯವರ ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ಅಶೋಕ್ ಭಾಲವಿ ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದರು.
ಅಶೋಕ್ ಭಾಲವಿ ಸಾವಿನ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ರವಾನಿಸಲಾಗಿದ್ದು, ಅದರ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನರೇಂದ್ರ ಕುಮಾರ್ ಸುರ್ವ್ಯವಂಶಿ ತಿಳಿಸಿದ್ದಾರೆ.
ಅಶೋಕ್ ಭಾಲವಿಯವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೈದ್ಯರು ಅಶೋಕ್ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದರು ಎಂದು ತಿಳಿಸಿದೆ.