ನವದೆಹಲಿ: ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿನ ನ್ಯಾಯಾಲಯವು ಏಪ್ರಿಲ್ 23ರ ವರೆಗೆ ವಿಸ್ತರಿಸಿದೆ.
ನವದೆಹಲಿ: ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿನ ನ್ಯಾಯಾಲಯವು ಏಪ್ರಿಲ್ 23ರ ವರೆಗೆ ವಿಸ್ತರಿಸಿದೆ.
ತನಿಖೆಯು ಮಹತ್ವದ ಹಂತದಲ್ಲಿದ್ದು, ಕೇಜ್ರಿವಾಲ್ ಕಸ್ಟಡಿ ಅವಧಿಯನ್ನು 14 ದಿನಗಳವರೆಗೆ ವಿಸ್ತರಿಸಬೇಕು ಎಂದು ನ್ಯಾಯಾಲಯಕ್ಕೆ ಇ.ಡಿ. ಮನವಿ ಮಾಡಿತ್ತು. ಅದರಂತೆ, ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದ್ದಾರೆ.
ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ 'ಅಬಕಾರಿ ನೀತಿ' ಜಾರಿ ವೇಳೆ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಸಂಬಂಧ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ.
ಇ.ಡಿ ಕಸ್ಟಡಿ ಅವಧಿ ಏಪ್ರಿಲ್ 1ರಂದು ಮುಕ್ತಾಯವಾದ ಕಾರಣ ಕೇಜ್ರಿವಾಲ್ ಅವರನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅಂದು ನ್ಯಾಯಾಲಯವು, ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತ್ತು.