ನವದೆಹಲಿ: ಅಡ್ಮಿರಲ್ ಆರ್. ಹರಿಕುಮಾರ್ ಸೇವೆಯಿಂದ ನಿವೃತ್ತರಾದ ಹಿನ್ನೆಲೆ ದಿನೇಶ್ ಕುಮಾರ್ ತ್ರಿಪಾಠಿ ಅವರು ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಇಂದು ಅಧಿಕಾರ ಸ್ವೀಕರಿಸಿದರು.
ನವದೆಹಲಿ: ಅಡ್ಮಿರಲ್ ಆರ್. ಹರಿಕುಮಾರ್ ಸೇವೆಯಿಂದ ನಿವೃತ್ತರಾದ ಹಿನ್ನೆಲೆ ದಿನೇಶ್ ಕುಮಾರ್ ತ್ರಿಪಾಠಿ ಅವರು ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಇಂದು ಅಧಿಕಾರ ಸ್ವೀಕರಿಸಿದರು.
ನೌಕಾಪಡೆಯ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸುವ ಮೊದಲು ತ್ರಿಪಾಠಿ ಅವರು ನೌಕಾಪಡೆಯ ಉಪ ಮುಖ್ಯಸ್ಥರಾಗಿ(ವೈಸ್ ಅಡ್ಮಿರಲ್) ಸೇವೆ ಸಲ್ಲಿಸಿದ್ದರು.
ಸಂವಹನ ಮತ್ತು ಎಲೆಕ್ಟ್ರಾನಿಕ್ ಯುದ್ಧ ತಜ್ಞರಾದ ಇವರು ಸುಮಾರು 30 ವರ್ಷಗಳ ಕಾಲ ಸುದೀರ್ಘ ಸೇವಾ ಅನುಭವ ಹೊಂದಿದ್ದಾರೆ. ಜತೆಗೆ ಅತಿ ವಿಶಿಷ್ಟ ಸೇವಾ ಪದಕ (AVSM) ಮತ್ತು ನವೋ ಸೇನಾ ಪದಕ (NM)ಗಳನ್ನು ಪಡೆದಿದ್ದಾರೆ.