ತಿರುವನಂತಪುರಂ: ಬಿಸಿಲಿನ ತಾಪದಿಂದಾಗಿ ರಾಜ್ಯದ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಒಂದು ವಾರ ಕಾರ್ಯಚಟುವಟಿಕೆ ಸ್ಥಗಿತಗೊಳಿಸಲು ಮುಂದಾಗಿದೆ.
ಅಂಗನವಾಡಿಗಳ ಇತರೆ ಚಟುವಟಿಕೆಗಳು ಎಂದಿನಂತೆ ನಡೆಯಲಿವೆ. ಈ ಅವಧಿಯಲ್ಲಿ ಮಕ್ಕಳಿಗೆ ನೀಡಬೇಕಾದ ಪೂರಕ ಪೌಷ್ಟಿಕಾಂಶವನ್ನು ಮನೆ ಮನೆಗೆ ತಲುಪಿಸಲಾಗುವುದು ಎಂದು ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದರು. ಬಿಸಿಲಿನ ಝಳದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಆರೋಗ್ಯ ಇಲಾಖೆಯ ಎಚ್ಚರಿಕೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.