ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದೆ. ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯದ ಆರ್ಥಿಕ ಸಂಪನ್ಮೂಲಕ್ಕಾಗಿ ಹಮ್ಮಿಕೊಂಡ ನಿಧಿ ಕೂಪನ್ ಡ್ರಾ ಮತ್ತು ಧಾರ್ಮಿಕ ಸಮಾರಂಭ ಮೇ. 1 ರಂದು ಬುಧವಾರ ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ. ಈ ಸಂದರ್ಭ ಲೋಕಕಲ್ಯಾಣಾರ್ಥವಾಗಿ ಶತರುದ್ರಾಭಿಷೇಕ, ಸಾಮೂಹಿಕ ಸತ್ಯನಾರಾಯಣ ಪೂಜೆ, ಸಾಮೂಹಿಕ ಬಲಿಪೂಜೆ, ಸಾಮೂಹಿಕ ಪ್ರಾರ್ಥನೆ ನಡೆಯಲಿದೆ. ಮಧ್ಯಾಹ್ನ 12 ರಿಂದ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ 12.30: ಮಹಾಪೂಜೆ, ಸಾಮೂಹಿಕ ಪ್ರಾರ್ಥನೆ, ಪ್ರಸಾದ ಭೋಜನ ನಡೆಯಲಿದೆ.
ಕಾರ್ಯಕ್ರಮದ ಯಶಸ್ವಿಗೆ ಜೀರ್ಣೋದ್ಧಾರ ಸಮಿತಿಯ ಪೂರ್ವ ಸಿದ್ಧತಾ ಸಭೆ ಸೋಮವಾರ ಜರಗಿತು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಸಂತ ಪೈ ಬದಿಯಡ್ಕ ಅಧ್ಯಕ್ಷತೆ ವಹಿಸಿದ್ದರು.. ಆಡಳಿತ ಮಂಡಳಿ ಅಧ್ಯಕ್ಷ ವೆಂಕಟರಮಣ ಭಟ್ ಚಂಬಲ್ತಿಮಾರ್, ಸೀತಾರಾಮ ನವಕಾನ, ಉಪಾಧ್ಯಕ್ಷ ಪಿ.ಜಿ. ಚಂದ್ರಹಾಸ ರೈ, ಕೋಶಾಧಿಕಾರಿ ಸೂರ್ಯನಾರಾಯಣ ಬಿ., ಕಾರ್ಯದರ್ಶಿ ಗಣೇಶ್ ಭಟ್ ಕಡ್ಡಪ್ಪು, ಯುವ ಸಮಿತಿ ಅಧ್ಯಕ್ಷ ಡಾ. ಶ್ರೀಶಕುಮಾರ್ ಪಂಜಿತ್ತಡ್ಕ, ಸತೀಶ್ ಭಟ್, ಕಾರ್ಯದರ್ಶಿ ಭಾಸ್ಕರ ಪಿ, ಸೂರ್ಯನಾರಾಯಣ ಶರ್ಮ ಮಾತನಾಡಿದರು.. ಶ್ರೀ ಕ್ಷೇತ್ರ ಅರ್ಚಕ ವೃಂದ ಸಿಬ್ಬಂದಿ ವರ್ಗ, ಸಂಘ ಸಂಸ್ಥೆಯ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದ ಯಶಸ್ವಿಗೆ ವಿವಿಧ ಉಪ ಸಮಿತಿಗಳನ್ನು ರೂಪಿಕರಿಸಲಾಯಿತು. ಪ್ರಧಾನ ಕಾರ್ಯದರ್ಶಿ ಜಗನ್ನಾಥ ರೈ ಪೆರಡಾಲ ಗುತ್ತು ಸ್ವಾಗತಿಸಿ, ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ನಿರಂಜನ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು.. ಯುವ ಸಮಿತಿ ಅಧ್ಯಕ್ಷ ಶ್ರೀಶಕುಮಾರ್ ವಂದಿಸಿದರು.