ಕೋಲ್ಕತ್ತ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ಭೂಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ಬುಧವಾರ ಆದೇಶಿಸಿದೆ. ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿದೆ.

ಪ್ರಕರಣದ ಬಗ್ಗೆ ಸಿಬಿಐನಿಂದ ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಕೋರ್ಟ್ ಹೇಳಿತು.
ಪ್ರಕರಣದ ವಿಚಾರಣೆಯನ್ನು ಮೇ 2ಕ್ಕೆ ಮುಂದೂಡಿ, ಅಂದು ಸಿಬಿಐ ಸಮಗ್ರ ವರದಿ ಸಲ್ಲಿಸಬೇಕು ಎಂದು ತಿಳಿಸಿತು.
ಟಿಎಂಸಿ ನಾಯಕ ಶಾಜಹಾನ್ ಶೇಖ್ ಅವರಿಗೆ ಸಂಬಂಧಿಸಿದ ಪ್ರದೇಶಗಳ ಮೇಲೆ ಜನವರಿ 5ರಂದು ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಗುಂಪೊಂದು ಅಧಿಕಾರಿಗಳ ಮೇಲೆ ಆಕ್ರಮಣ ಮಾಡಿತ್ತು.