HEALTH TIPS

ಗೋವಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಬಿಗಿ ಭದ್ರತೆ

         ಣಜಿ: ಗೋವಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ನೌಕಾಪಡೆಯ ನೆಲೆಯ ಭಾಗವಾಗಿರುವ ದಾಬೋಲಿಮ್‌ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಭದ್ರತಾ ಸಿಬ್ಬಂದಿಗೆ ಬೆದರಿಕೆ ಇ-ಮೇಲ್ ಬಂದಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

          ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಬಗ್ಗೆ ತಮ್ಮ ಕಚೇರಿಗೆ ಇಂದು ಬೆಳಿಗ್ಗೆ ಇ-ಮೇಲ್ ಸಂದೇಶ ಬಂದಿದೆ ಎಂದು 'ಪಿಟಿಐ'ಗೆ ವಿಮಾನ ನಿಲ್ದಾಣದ ನಿರ್ದೇಶಕ ಧನಂಜಯ ರಾವ್ ತಿಳಿಸಿದ್ದಾರೆ.

ಇ-ಮೇಲ್ ಸಂದೇಶ ಗಮನಕ್ಕೆ ಬಂದ ಕೂಡಲೇ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಜತೆಗೆ, ಮತ್ತಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಆದರೆ, ವಿಮಾನ ಕಾರ್ಯಾಚರಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ರಾವ್ ಹೇಳಿದ್ದಾರೆ.

                ಬೆದರಿಕೆ ಇ-ಮೇಲ್‌ನ ಮೂಲ ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದೇವೆ. ಜತೆಗೆ ದೇಶದ ಇತರ ವಿಮಾನ ನಿಲ್ದಾಣಗಳಿಗೂ ಸಂದೇಶವನ್ನು ರವಾನಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಬಾಂಬ್ ಬೆದರಿಕೆ ಕುರಿತು ವಿಮಾನ ನಿಲ್ದಾಣದ ಅಧಿಕಾರಿಗಳು ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ವಿಮಾನದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಗೋವಾ ಪೊಲೀಸರು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries