ಉಪ್ಪಳ: ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣಾಮ್ನಾಯ ಶೃಂಗೇರಿ ಶಾರದಾಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸನ್ನಿಧಾನಂಗಳವರ ತತ್ಕರಕಮಲಸಂಜಾತರಾದ ‘ಪರಮಪೂಜ್ಯ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಉಪ್ಪಳ ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಏ. 28 ಭಾನುವಾರ ಸಂಜೆ 4.ಕ್ಕೆ ಚಿತ್ತೈಸಲಿದ್ದು, ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಭಕ್ತರನ್ನು ಆಶೀರ್ವದಿಸಿ ಹರಸಲಿದ್ದಾರೆ.
ಈ ಪುಣ್ಯ ಕಾರ್ಯಕ್ರಮದಲ್ಲಿ ಶ್ರೀ ಮಠದ ವತಿಯಿಂದ ಹಾಗೂ ವಿವಿಧ ಧಾರ್ಮಿಕ ಶ್ರದ್ಧಾ ಕೇಂದ್ರಗಳ ವತಿಯಿಂದ ಶ್ರೀ ಜಗದ್ಗುರುಗಳವರ ಚರಣಾರವಿಂದಗಳಿಗೆ ಅಭಿವಂದನೆಗಳನ್ನು ಸಮರ್ಪಿಸಲಿದ್ದಾರೆ. ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಜಗದ್ಗುರುಗಳವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ, ಜಗದ್ಗುರುಗಳವರ ಅಭಿವಂದನಾ ಸಮಿತಿ, ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದ ಪ್ರಕಟನೆಯಲ್ಲಿ ತಿಳಿಸಲಾಗಿದೆ.