ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾ ವಿಕಾಸ್ ಅಗಾಡಿ-ಇಂಡಿಯಾ ಮೈತ್ರಿಕೂಟ ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಹೋಗುತ್ತೇವೆ ಎನ್ನುತ್ತಿದ್ದಾರೆ. ಆದರೆ, ಅದು ಎಂಜಿನ್ ಇರುವ ರೈಲು ಮಾತ್ರ. ಬೋಗಿಗಳಿಲ್ಲ ಎಂದು ಲೇವಡಿ ಮಾಡಿದ್ದಾರೆ.
ನಾಗ್ಪುರ: ದೇಶದಲ್ಲಿ ಇದುವರೆಗೆ ಆಂತರಿಕ ಸಂಘರ್ಷಗಳಿಂದ ಒಡೆದುಹೋಗದ ಏಕೈಕ ಪಕ್ಷ ಎಂದರೆ ಅದು ಭಾರತೀಯ ಜನತಾ ಪಕ್ಷ (ಬಿಜೆಪಿ) ಎಂದು ಮಹಾರಾಷ್ಟ್ರ ಬಿಜೆಪಿ ನಾಯಕ ಹಾಗೂ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ.
ನಾಗ್ಪುರದಲ್ಲಿ ಶನಿವಾರ ನಡೆದ ಬಿಜೆಪಿಯ 44ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಾರನ್ನೋ ಮುಖ್ಯಮಂತ್ರಿ, ಪ್ರಧಾನಿ ಮಾಡಲು ನಾವು ಪಕ್ಷ ಕಟ್ಟಿಲ್ಲ ಎಂದು ಪರೋಕ್ಷವಾಗಿ ವಿರೋಧಪಕ್ಷಗಳಿಗೆ ಕುಟುಕಿದರು.
ರಾಷ್ಟ್ರದ ಹಿತಾಸಕ್ತಿಗೆ ಅನುಗುಣವಾಗಿ ತನ್ನ ಕಾರ್ಯಕರ್ತರನ್ನು ಬೆಳೆಸುವ ಏಕೈಕ ಪಕ್ಷ ಬಿಜೆಪಿ ಎಂದು ಹೇಳಿದರು.